ETV Bharat / state

ಹಳಿತಪ್ಪಿದ ಶಿಕ್ಷಣವನ್ನು ಮತ್ತೆ ಸರಿದಾರಿಗೆ ತರಲು ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಶೇಖರ್ ಹಾಗೂ ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ಅವರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿ ಈ ಹಕ್ಕೊತ್ತಾಯ ಮಂಡಿಸಿದ್ದಾರೆ.

ಸರ್ಕಾರಕ್ಕೆ ಕಾಂಗ್ರೆಸ್ ನಗರ ಜಿಲ್ಲಾಧ್ಯಕ್ಷರ ಆಗ್ರಹ

author img

By

Published : Sep 6, 2020, 3:10 PM IST

ಬೆಂಗಳೂರು: ಹಳಿ ತಪ್ಪಿರುವ ಶಿಕ್ಷಣವನ್ನು ಮತ್ತೆ ಸರಿದಾರಿಗೆ ತರಲು ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಹಕ್ಕೊತ್ತಾಯ ಮಂಡಿಸಿದೆ.

ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಶೇಖರ್ ಹಾಗೂ ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ಅವರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಈ ಹಕ್ಕೊತ್ತಾಯ ಮಂಡಿಸಿದ್ದಾರೆ. ಹಕ್ಕೊತ್ತಾಯ ಒಟ್ಟು 11 ಅಂಶಗಳನ್ನು ಒಳಗೊಂಡಿದೆ.

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಹಳ್ಳ ಹಿಡಿಸಿರುವ ಹಾಗೂ ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಸಹಾಯ ಮಾಡಲು ಯಾವುದೇ ಯೋಜನೆ ರೂಪಿಸಲು ವಿಫಲವಾಗಿರುವ ಬೇಜವಾಬ್ದಾರಿ ರಾಜ್ಯ ಸರ್ಕಾರದ ವೈಫಲ್ಯವನ್ನು ನಾವು ಖಂಡಿಸುತ್ತೇವೆ ಎಂದು ಉಭಯ ನಾಯಕರು ತಿಳಿಸಿದರು.

ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಮಂಡಿಸಿದ ಹಕ್ಕೊತ್ತಾಯ:

ಮಧ್ಯಾಹ್ನದ ಬಿಸಿಯೂಟ ವನ್ನು ವಿದ್ಯಾರ್ಥಿಗಳ ಮನೆಗಳಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡುವ ಮೂಲಕ, ಅವರ ಅಪೌಷ್ಟಿಕತೆಯನ್ನು ದೂರ ಮಾಡಬೇಕು. ಶಾಲೆ ಬಿಟ್ಟ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿ ಪೋಷಕರ ಮನವೊಲಿಸಿ ಅವರನ್ನು ಮರಳಿ ಶಾಲೆಗೆ ಕರೆತರುವ ಯೋಜನೆ ರೂಪಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗದಲ್ಲಿ ಇರುವವರಿಗೆ ಆರ್ಥಿಕ ಪರಿಹಾರ ಪ್ಯಾಕೇಜ್ ಒದಗಿಸಬೇಕು. ಕೊರೊನಾ ವಿರುದ್ಧ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಶಿಕ್ಷಕರಿಗೆ ಪರಿಹಾರ ನೀಡಬೇಕು. ಬಡ್ಡಿ ರಹಿತ ಸಾಲಗಳನ್ನು ನೀಡುವ ಮೂಲಕ ಶಾಲೆಗಳ ಆರ್ಥಿಕ ಸಾಮರ್ಥ್ಯವನ್ನು ವೃದ್ಧಿಸುವತ್ತ ಗಮನ ಹರಿಸಬೇಕು.

ಖಾಸಗಿ ಶಾಲೆಗಳಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಈ ಮೂಲಕ ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಶಾಲಾ ಶುಲ್ಕ ಕಡಿಮೆ ಮಾಡಲು ಒತ್ತಡವನ್ನು ಸರ್ಕಾರ ಖಾಸಗಿ ಸಂಸ್ಥೆಗಳ ಮೇಲೆ ಹೇರಬೇಕು. ಆದ್ಯತೆಯ ಮೇರೆಗೆ ತಂತ್ರಜ್ಞಾನ ಬಳಸಿಕೊಳ್ಳಲು ಅಂತರವನ್ನು ಕಡಿಮೆಗೊಳಿಸಬೇಕು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗಾಗಿ ಮಾರ್ಗಸೂಚಿಗಳನ್ನು ಹೊರಡಿಸಬೇಕು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಆದ್ಯತೆಯಾಗಿ ಪರಿಗಣಿಸಬೇಕು.

ಪಿ.ಯು.ಸಿ ಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ 4 ವರ್ಷ ಬ್ಯಾಚುಲರ್ ಆಫ್ ವಿಶ್ಯುವಲ್ ಆರ್ಟ್ಸ್ (ಐವಿಎ) ಪದವಿಗೆ ಪ್ರವೇಶ ಆದರೆ ನಿಯಮ ಮೀರಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೆಲ ಕಾಲೇಜುಗಳಲ್ಲಿ ಎಸ್.ಎಸ್ ಎಲ್.ಸಿ ಉತ್ತೀರ್ಣರಾದವರಿಗೆ ಪ್ರವೇಶ ನೀಡುತ್ತಿರುವುದು ಮಾಧ್ಯಮ ವರದಿಯಿಂದ ಬೆಳಕಿಗೆ ಬಂದಿದೆ. ಕನ್ನಡ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಗದಗ, ಬಾಗಲಕೋಟೆ, ಮೈಸೂರು ಮಂಗಳೂರು, ಬೆಳಗಾವಿ, ಬೀದರ್ ಸೇರಿ ಒಟ್ಟು 23 ಕಲಾ ಕಾಲೇಜುಗಳು ಬರುತ್ತವೆ. ಈ ಪೈಕಿ 12 ಕಾಲೇಜುಗಳಲ್ಲಿ ನಿಯಮ ಮೀರಿ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಕೊಡುತ್ತಿರುವುದು ಸಚಿವರ ಗಮನಕ್ಕೆ ಬಂದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ನಗರಕ್ಕೆ ಸಂಬಂಧಪಟ್ಟಂತೆ ಹಕ್ಕೊತ್ತಾಯ:

ಬಿಬಿಎಂಪಿ ಯಲ್ಲಿ ಬರುವ ರೆಸಿಡೆನ್ಸಿಯಲ್ ಬಿಲ್ಡಿಂಗ್ ಮತ್ತು ಕಮರ್ಷಿಯಲ್ ಬಿಲ್ಡಿಂಗ್ ಮಾಲೀಕರಿಗೆ 6 ತಿಂಗಳುಗಳಿಂದ ಕೋವಿಡ್ ನಿಂದಾಗಿ ಬಾಡಿಗೆ ಬಂದಿಲ್ಲ. ಬಾಡಿಗೆ ಕೊಡುವ ಅವಶ್ಯಕತೆ ಇಲ್ಲವೆಂದು ಸರ್ಕಾರ ಹೇಳಿದೆ. ಈ ಪರಿಸ್ಥಿತಿಯಲ್ಲಿ ಆಸ್ತಿ ಮಾಲೀಕರು 2020 -21ರ ಆಸ್ತಿ ತೆರಿಗೆಯನ್ನು ಹೇಗೆ ಕಟ್ಟಲು ಸಾಧ್ಯ. ಸಾಲವನ್ನು ತೆಗೆದುಕೊಂಡು ಅವರು ತಮ್ಮ ಕಟ್ಟಡಗಳನ್ನು ನಿರ್ಮಿಸಿ, ಬಾಡಿಗೆ ನೀಡುತ್ತಾರೆ. ಜೀವನ ಸಾಗಿಸುವುದೇ ಕಷ್ಟವಿರುವಾಗ ಆಸ್ತಿ ತೆರಿಗೆ ಹೇಗೆ ಬರಲು ಸಾಧ್ಯ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರು ಆಸ್ತಿ ತೆರಿಗೆಯನ್ನು ಸಂಪೂರ್ಣ ಮನ್ನಾ ಮಾಡಲು ಈಗಾಗಲೇ ಒತ್ತಾಯಿಸಿದರು ಸಹ ಸರ್ಕಾರ ಆಸ್ತಿ ಮಾಲೀಕರ ಜೀವನದ ಮೇಲೆ ಚೆಲ್ಲಾಟವಾಡುತ್ತಿದೆ. ಅದನ್ನು ಈ ವರ್ಷದ ಆಸ್ತಿ ತೆರಿಗೆಯನ್ನು ಕಡ್ಡಾಯವಾಗಿ ಮನ್ನಾ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತೊಮ್ಮೆ ಒತ್ತಾಯಿಸುತ್ತದೆ.

ಮಹಾನಗರ ಪಾಲಿಕೆ ಚುನಾವಣೆಗಳನ್ನು ಕುಂಟು ನೆಪವೊಡ್ಡಿ ಮುಂದೂಡಿಕೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಯಾವುದೇ ಕಾರಣಕ್ಕೆ ವಾರ್ಡ್‌ಗಳ ಸಂಖ್ಯೆ ಹೆಚ್ಚಾದರು ಸರಿಯೇ ಚುನಾವಣೆಗಳನ್ನು ಕಡ್ಡಾಯವಾಗಿ ಪ್ರಜಾಸತ್ತಾತ್ಮಕವಾಗಿ ಸರಿಯಾದ ಸಮಯದಲ್ಲಿ ನಡೆಸಬೇಕು. ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಲಿದ್ದೇವೆ ಎಂದು ಕಾಂಗ್ರೆಸ್​ ಮುಖಂಡರು ಎಚ್ಚರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.