ETV Bharat / state

ರಾಜ್ಯ- ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಧರಣಿ

ರಾಜ್ಯದಲ್ಲಿ ಉಂಟಾದ ಪ್ರವಾಹ ಮತ್ತು ಬರಗಾಲ ಇವೆಲ್ಲದರಿಂದ ರಾಜ್ಯದ ಜನ ಕಂಗಾಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾತ್ರ ಕೈ ಕಟ್ಟಿ ಕುಳಿತಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಹಾಗೂ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ರೂಪಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷದ ಧರಣಿ ಆರಂಭಿಸಿದೆ.

author img

By

Published : Aug 29, 2019, 12:42 PM IST

ಧರಣಿ ಆರಂಭಿಸಿದ ಕಾಂಗ್ರೆಸ್​​

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಹಾಗೂ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ರೂಪಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಧರಣಿ ಆರಂಭವಾಗಿದೆ.

ಧರಣಿ ಆರಂಭಿಸಿದ ಕಾಂಗ್ರೆಸ್​​

ಪರಿಸ್ಥಿತಿ ನಿಗ್ರಹಕ್ಕೆ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳದ ಕಾರಣ, ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಮೊತ್ತ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಕೂಡ ಒತ್ತಡ ಹೇರುವ ಕಾರ್ಯ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರು ದೂರಿದರು. ಬೆಂಗಳೂರಿನ ಮೌರ್ಯ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಬೆಳಗ್ಗೆ 11.30ಕ್ಕೆ ಧರಣಿ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ರಾಜ್ಯದ ಎಲ್ಲ ಹಿರಿಯ ಕಾಂಗ್ರೆಸ್ ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಸಂಜೆ ಐದು ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೂ ನಿಯೋಗ ಮನವಿ ಪತ್ರ ಸಲ್ಲಿಸಲಿದೆ.

ಮಾಜಿ ಸಿಎಂಸಿದ್ದರಾಮಯ್ಯ, ಮಾಜಿ ಸಂಸದರಾದ ವೀರಪ್ಪ ಮೊಯಿಲಿ, ಚಂದ್ರಪ್ಪ, ವಿಎಸ್ ಉಗ್ರಪ್ಪ, ಮಾಜಿ ಸಚಿವ ಎಚ್​​.ಕೆ. ಪಾಟೀಲ್, ಜಮೀರ್ ಅಹ್ಮದ್, ಕೆಜೆ ಜಾರ್ಜ್, ಆರ್ ವಿ ದೇಶಪಾಂಡೆ, ರಮಾನಾಥ್ ರೈ, ಹೆಚ್ ಎಂ ರೇವಣ್ಣ, ರಾಮಲಿಂಗರೆಡ್ಡಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ನಾಥ್ ಮತ್ತಿತರರು ಭಾಗವಹಿಸಿದ್ದು, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅನುಪಸ್ಥಿತಿ ಎದ್ದು ಕಾಡಿತು.

Intro:newsBody:ರಾಜ್ಯ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷದ ಧರಣಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಹಾಗೂ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ರೂಪಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಧರಣಿ ಆರಂಭವಾಗಿದೆ.
ಪರಿಸ್ಥಿತಿ ನಿಗ್ರಹಕ್ಕೆ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳದ ಕಾರಣ, ಕೇಂದ್ರ ಸರ್ಕಾರ ಇದುವರೆಗೂ ಪರಿಹಾರ ಮೊತ್ತ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಕೂಡ ಒತಗತಡ ಹೇರುವ ಕಾರ್ಯ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕರು ದೂರಿದರು.
ಬೆಂಗಳೂರಿನ ಮೌರ್ಯ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಬೆಳಿಗ್ಗೆ 11.30 ಕ್ಕೆ ಧರಣಿ ಆರಂಭವಾಗಿದ್ದು ಸಂಜೆ 5ರವರೆಗೆ ನಡೆಯಲಿದೆ. ರಾಜ್ಯದ ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಸಂಜೆ ಐದು ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೂ ನಮ್ಮ ನಿಯೋಗ ಮನವಿ ಪತ್ರ ಸಲ್ಲಿಸಲಿದ್ದಾರೆ.
ಮಾಜಿ ಸಿಎಂಸಿದ್ದರಾಮಯ್ಯ, ಮಾಜಿ ಸಂಸದರಾದ ವೀರಪ್ಪಮೊಯಿಲಿ, ಚಂದ್ರಪ್ಪ, ವಿಎಸ್ ಉಗ್ರಪ್ಪ, ಮಾಜಿ ಸಚಿವ ಎಚ್ಕೆ ಪಾಟೀಲ್ ಜಮೀರ್ ಅಹ್ಮದ್, ಕೆಜೆ ಜಾರ್ಜ್ ಆರ್ ವಿ ದೇಶಪಾಂಡೆ ರಮಾನಾಥ್ ರೈ, ಹೆಚ್ ಎಂ ರೇವಣ್ಣ, ರಾಮಲಿಂಗರೆಡ್ಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ನಾಥ್ ಮತ್ತಿತರರು ಭಾಗವಹಿಸಿದ್ದಾರೆ. ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅನುಪಸ್ಥಿತಿ ಎದ್ದು ಕಾಡಿತು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.