ETV Bharat / state

ಜಯಲಲಿತಾಗೆ ಸೇರಿದ ವಸ್ತುಗಳ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನು ನೇಮಿಸಲು ಸರ್ಕಾರಕ್ಕೆ ಸೂಚಿಸಿದ ನ್ಯಾಯಾಲಯ - ಈಟಿವಿ ಭಾರತ ಕನ್ನಡ

ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ - ಅಕ್ರಮ ಆಸ್ತಿ, ಬೆಲೆ ಬಾಳುವ ಆಸ್ತಿ ಜಪ್ತಿಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕಕ್ಕೆ ನ್ಯಾಯಾಲಯ ಸೂಚನೆ

the-court-directed-to-appoint-a-special-prosecutor-to-dispose-of-jayalalithaas-belongings
ಜಯಲಲಿತಾಗೆ ಸೇರಿದ ವಸ್ತುಗಳ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನು ನೇಮಿಸಲು ಸರ್ಕಾರಕ್ಕೆ ಸೂಚಿಸಿದ ನ್ಯಾಯಾಲಯ
author img

By

Published : Jan 25, 2023, 9:26 PM IST

ಬೆಂಗಳೂರು : ತಮಿಳುನಾಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಅಕ್ರಮ ಆಸ್ತಿ ಮತ್ತು ಬೆಲೆ ಬಾಳುವ ವಸ್ತುಗಳನ್ನು ವಿಲೇವಾರಿ ಮಾಡಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ನಗರದ ವಿಶೇಷ ನ್ಯಾಯಾಲಯ ರಾಜ್ಯ ಗೃಹ ಇಲಾಖೆಗೆ ಪತ್ರ ಬರೆದಿದೆ. ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ನಗರದ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ(ಪ್ರಥಮ ಮೇಲ್ಮನವಿ ಪ್ರಾಧಿಕಾರ) ಇತ್ತೀಚೆಗೆ ಹೊರಡಿಸಿರುವ ಆದೇಶದಲ್ಲಿ ಈ ಅಂಶ ಉಲ್ಲೇಖವಾಗಿದೆ.

ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರು. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಈ ಸಂಬಂಧ ನರಸಿಂಹಮೂರ್ತಿ, 2022ರ ಆ.12ರಂದು ನಗರದ ಸಿಟಿ ಸಿವಿಲ್ ಕೋರ್ಟ್ ಮಾಹಿತಿ ಹಕ್ಕು ಅಧಿಕಾರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಜಪ್ತಿ ಮಾಡಿರುವ ಜಯಲಲಿತಾ ಅವರಿಗೆ ಸೇರಿದ ವಸ್ತುಗಳ ವಿಲೇವಾರಿ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು. ಆದರೆ, ಮಾಹಿತಿ ನೀಡಲು ನಿರಾಕರಿಸಿದ ಮಾಹಿತಿ ಹಕ್ಕು ಅಧಿಕಾರಿ, 2022ರ ಸೆ.7ರಂದು ಆ ಅರ್ಜಿ ತಿರಸ್ಕರಿಸಿದ್ದರು. ಇದರಿಂದ ಪ್ರಥಮ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇತ್ತೀಚೆಗೆ ಮೇಲ್ಮನವಿಯ ವಿಚಾರಣೆ ನಡೆಸಿದ ಮೇಲ್ಮನವಿ ಪ್ರಾಧಿಕಾರ ಈ ಆದೇಶ ನೀಡಿದೆ.

ಆದೇಶದಲ್ಲಿರುವ ಅಂಶಗಳು : ಜಯಲಲಿತಾರಿಂದ ಜಪ್ತಿ ಮಾಡಿರುವ ವಸ್ತುಗಳ ವಿಲೇವಾರಿಗೆ ಸಂಬಂಧಪಟ್ಟ ನ್ಯಾಯಾಲಯ ಕಾನೂನು ಪ್ರಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ದಾಖಲೆ ಪರಿಶೀಲಿಸಿದಾಗ ವಿಶೇಷ ನ್ಯಾಯಾಲಯವು ರಾಜ್ಯ ಕಾನೂನು ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು, ವಸ್ತುಗಳನ್ನು ವಿಲೇವಾರಿ ಮಾಡಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ಕೋರಿದೆ. ನಂತರ ಇದೇ ವಿಚಾರವಾಗಿ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ಇತ್ತೀಚೆಗೆ ಮತ್ತೊಂದು ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ, ಈ ಎಲ್ಲಾ ಮಾಹಿತಿ ಮತ್ತು ಪತ್ರಗಳ ಪ್ರತಿಗಳನ್ನು ಮೇಲ್ಮನವಿದಾರರಿಗೆ ಒದಗಿಸಬೇಕು ಎಂದು ಮಾಹಿತಿ ಹಕ್ಕು ಅಧಿಕಾರಿಗೆ ಪ್ರಥಮ ಮೇಲ್ಮನವಿ ಪ್ರಾಧಿಕಾರ ಆದೇಶಿಸಿದೆ.

ಜಯಲಲಿತಾರಿಂದ ವಶಪಡಿಸಿಕೊಂಡ ವಸ್ತುಗಳು : 7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ.ವಿ. ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್‌ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ : ಜಯಲಲಿತಾ ಸಾವು.. ಪ್ರಧಾನಿ ಮೋದಿ ವಿರುದ್ಧ ಬೊಟ್ಟು ತೋರಿಸಿದ ಡಿಎಂಕೆ ಶಾಸಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.