ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ರಿಪೋರ್ಟ್ ಕಡ್ಡಾಯವಲ್ಲ - ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ

ಶುಕ್ರವಾರ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದೆ. ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ರಿಪೋರ್ಟ್ ಕಡ್ಡಾಯವಲ್ಲ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿದೆ ಎಂದು ‌ಪಿಯು ಬೋರ್ಡ್ ಸ್ಪಷ್ಟಪಡಿಸಿದೆ.

PUC
ದ್ವಿತೀಯ ಪಿಯುಸಿ
author img

By

Published : Apr 21, 2022, 7:54 PM IST

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆ ಹಾಗೂ ತಾಂತ್ರಿಕ ಸಲಹಾ ಸಮಿತಿ ಎಸ್ಒಪಿ ಜಾರಿ ಮಾಡಿದೆ. ‌ಅದರಲ್ಲಿ ಪ್ರಮುಖವಾಗಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿದೆ.‌ 2 ಡೋಸ್/ಸಂಪೂರ್ಣ ವ್ಯಾಕ್ಸಿನೇಷನ್​ನ‌ ಪ್ರಮಾಣಪತ್ರವನ್ನೂ ಪರಿಶೀಲಿಸುವಂತೆ ಸಲಹೆ ನೀಡಿದೆ.‌ ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ವ್ಯಾಕ್ಸಿನೇಷನ್‌ ರಿಪೋರ್ಟ್ ಕಡ್ಡಾಯವಲ್ಲ ಎಂದು ಪಿಯು ಬೋರ್ಡ್ ಸ್ಪಷ್ಟಪಡಿಸಿದೆ.

ಸೋಂಕಿತರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕು ಇಳಿಕೆ ಕಂಡಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಯಥಾಸ್ಥಿತಿಯಲ್ಲಿ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಸ್ ಆಗುವುದು ಕಡ್ಡಾಯವಾಗಿದೆ. ಇದರ ಹೊರತಾಗಿ ಒಂದು ವೇಳೆ ಯಾವುದಾದರೂ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟರೆ ಅವ್ರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗ್ತಿದೆ. ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿಯಲ್ಲಿ ಸೋಂಕು ದೃಢಪಟ್ಟ ವರದಿಯಾಗಿಲ್ಲ ಎಂದು ಪಿಯು ಬೋರ್ಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದ ಗುಣಮುಖವಾದ ಮಹಿಳೆಗೆ ಹೃದಯಾಘಾತ: 15 ಬಾರಿ ಸಿಪಿಆರ್‌ ನಡೆಸಿ ವೈದ್ಯರಿಂದ ಪ್ರಾಣ ರಕ್ಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.