ETV Bharat / state

ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ - Deputy Chief Minister Govinda M. Karajola

ಸಾರ್ವಜನಿಕ ಆಸ್ತಿಯಾಗಿ ಸೃಷ್ಟಿಸಲ್ಪಡಬಹುದಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ
author img

By

Published : Sep 7, 2019, 10:05 PM IST

ಬೆಂಗಳೂರು: ಸಾರ್ವಜನಿಕ ಆಸ್ತಿಯಾಗಿ ಸೃಷ್ಟಿಸಲ್ಪಡಬಹುದಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಸಭೆಯಲ್ಲಿ ಮಾತನಾಡಿದ ಅವರು, ನಿಗಮವು ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಉತ್ತಮ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು, ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಪೈಪ್ ಲೈನ್, ಕೇಬಲ್ ಹಾಗೂ ರಸ್ತೆ ತಡೆಗಳನ್ನ ಅಳವಡಿದೇ ರಸ್ತೆಗಳು ಹಾಳಾಗುತ್ತಿವೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತಮ ತಂತ್ರಜ್ಞಾನ ಅಳವಡಿಕೆ ಮೂಲಕ ರಸ್ತೆಗಳನ್ನು ನಿರ್ವಹಣೆ ಮಾಡಿ, ರಸ್ತೆ ತಡೆಗಳನ್ನು ವೈಜ್ಞಾನಿಕ ಮಾದರಿಯಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಳಂಬ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಕಾಮಗಾರಿಯ ವೆಚ್ಚವೂ ಅಧಿಕವಾಗುತ್ತದೆ. ನಿಗಮವು ಸದೃಢವಾಗಲು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ನೆರೆಪೀಡಿತ ಪ್ರದೇಶಗಳಲ್ಲಿರುವ ಪರಿಶಿಷ್ಟ ಜಾತಿ ಪಂಗಡದ ಸಮುದಾಯದವರಿಗೆ ಮೂಲಭೂತ ಸೌಕರ್ಯ ಒದಗಿಸಲು ಎಲಿವೇಟೆಡ್ ಕಾರಿಡಾರ್ ಅನುದಾನವನ್ನ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಗೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

Intro:ಬೆಂಗಳೂರು : ಸಾರ್ವಜನಿಕ ಆಸ್ತಿಯಾಗಿ ಸೃಜಿಸಲ್ಪಡಬಹುದಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ. Body:ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಸಭೆಯಲ್ಲಿ ಮಾತನಾಡಿದ ಅವರು, ನಿಗಮವು ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಉತ್ತಮ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು, ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಪೈಪ್ ಲೈನ್, ಕೇಬಲ್ ಹಾಗು ರಸ್ತೆ ತಡೆಗಳನ್ನು ಅಳವಡಿಸಲು ರಸ್ತೆಗಳನ್ನು ಹಾಳಾಗುತ್ತಿವೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತಮ ತಂತ್ರಜ್ಞಾನ ಅಳವಡಿಕೆ ಮೂಲಕ ರಸ್ತೆಗಳನ್ನು ನಿರ್ವಹಣೆ ಮಾಡಿ, ರಸ್ತೆ ತಡೆಗಳನ್ನು ವೈಜ್ಞಾನಿಕ ಮಾದರಿಯಲ್ಲಿ ಅಳವಡಿಸಲು ಕ್ರಮಕೈಗೊಳ್ಳಬೇಕು. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಳಂಬ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಕಾಮಗಾರಿಯ ವೆಚ್ಚವೂ ಅಧಿಕವಾಗುತ್ತದೆ. ನಿಗಮವು ಸದೃಡವಾಗಲು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ನೆರೆಪೀಡಿತ ಪ್ರದೇಶಗಳಲ್ಲಿರುವ ಪರಿಶಿಷ್ಟ ಜಾತಿ ಪಂಗಡದ ಸಮುದಾಯದವರಿಗೆ ಮೂಲಭೂತಸೌಕರ್ಯ ಒದಗಿಸಲು ಎಲಿವೇಟೆಡ್ ಕಾರಿಡಾರ್ ಅನುದಾನವನ್ನು ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಗೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಗುರುಪ್ರಸಾದ್, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್, ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ, ಕೆಶಿಪ್ ಸಿಪಿಓ ಕೃಷ್ಣರೆಡ್ಡಿ, ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.