ಬೆಂಗಳೂರು: ಚೀನಾ ದಾಳಿಯಿಂದ ಹುತಾತ್ಮರಾದ ಯೋಧರ ಸಾವು ತೀವ್ರ ನೋವು ತಂದಿದೆ. ಕೊರೋನಾ ಸಂಕಷ್ಟದ ಸಮಯವನ್ನು ದುರುಪಯೋಗ ಮಾಡಿಕೊಂಡಿರುವ ಚೀನಾ ಭಾರತದ ಗಡಿಯೊಳಗೆ ಕುತಂತ್ರದಿಂದ ನುಸುಳಿ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಹಿಂಸಾತ್ಮಕ ಕೃತ್ಯ ನಡೆಸಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.
ಇಂತಹ ಸಂಕಷ್ಟದ ಸಮಯದಲ್ಲಿ ಸೈನಿಕರ ಜೊತೆ ಹಾಗೂ ಸೈನಿಕರ ಕುಟುಂಬದ ಜೊತೆ ಆಮ್ ಆದ್ಮಿ ಪಕ್ಷ ನಿಲ್ಲುತ್ತದೆ. ಹುತಾತ್ಮರಾದ ಸೈನಿಕರ ಆತ್ಮಕ್ಕೆ ಶಾಂತಿ ಕೋರುತ್ತಾ, ಕೇಂದ್ರ ಸರ್ಕಾರ ಹಾಗೂ ಚೀನಾ ಸರ್ಕಾರ ಈ ವೇಳೆ ತೆಗೆದುಕೊಳ್ಳುವ ಸೂಕ್ತ ನಿರ್ಧಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸುತ್ತದೆ ಎಂದು ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮೇಣದ ದೀಪಗಳನ್ನು ಹಚ್ಚುವ ಮೂಲಕ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು.