ETV Bharat / state

ಸುಪ್ರೀಂಕೋರ್ಟ್​ನಲ್ಲಿ ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರದ ಮೋಸ ಬಯಲಾಗಿದೆ: ಗೌರವ್ ವಲ್ಲಭ್

ನ್ಯಾಯಾಲಯದಲ್ಲಿ ತನ್ನ ಆದೇಶಕ್ಕೆ ತಾನೇ ತಡೆಯಾಜ್ಞೆ ಕೊಟ್ಟಿದೆ. ಬಿಜೆಪಿ ಸರ್ಕಾರ ಮೀಸಲಾತಿ ಹೆಸರಿನಲ್ಲಿ ಮಾಡುತ್ತಿರುವ ಮೋಸ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷ ಹೇಳಿದ್ದು ನಿಜವಾಗಿದೆ ಎಂದು ಕಾಂಗ್ರೆಸ್​​ ವಕ್ತಾರ ಗೌರವ್​ ವಲ್ಲಭ್​​ ಹೇಳಿದ್ದಾರೆ.

the-deception-of-the-bjp-government-has-been-exposed-gaurav-vallabh
ಸುಪ್ರೀಂಕೋರ್ಟ್​ನಲ್ಲಿ ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರದ ಮೋಸ ಬಯಲಾಗಿದೆ: ಗೌರವ್ ವಲ್ಲಭ್
author img

By

Published : Apr 26, 2023, 9:12 AM IST

ಬೆಂಗಳೂರು: ಸುಪ್ರೀಂಕೋರ್ಟ್​ನಲ್ಲಿ ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರದ ಮೋಸ ಬಯಲಾಗಿದೆ ಎಂದು ಎಐಸಿಸಿ ವಕ್ತಾರರಾದ ಗೌರವ್ ವಲ್ಲಭ್ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಬೊಮ್ಮಾಯಿ ಅವರ ಸರ್ಕಾರ ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಒಳ ಮೀಸಲಾತಿ ವಿಚಾರವಾಗಿ ತನ್ನ ಆದೇಶದ ಕುರಿತು ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರನ್ನೂ ಮೋಸ ಮಾಡುವ ಬಿಜೆಪಿ ತಂತ್ರಗಾರಿಕೆ ಬಯಲಾಗಿದೆ. ಮೀಸಲಾತಿ ಹೆಸರಿನಲ್ಲಿ ಎಲ್ಲ ಸಮುದಾಯಗಳನ್ನು ಮೋಸ ಮಾಡುವ ಬಿಜೆಪಿ ಪಾಪದ ಕೃತ್ಯ ಮುಂದುವರಿದಿದೆ. ಬೊಮ್ಮಾಯಿ ಅವರ ಸರ್ಕಾರ ತನ್ನ ಮೀಸಲಾತಿ ಹೆಚ್ಚಳದ ಆದೇಶಕ್ಕೆ ಸುಪ್ರೀಂಕೋರ್ಟ್​ನಲ್ಲಿ ತಡೆ ನೀಡಿದೆ ಎಂದಿದ್ದಾರೆ.

ಸುಪ್ರೀಂಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಬೊಮ್ಮಾಯಿ ಅವರ ಸರ್ಕಾರ ತನ್ನ ಆದೇಶಕ್ಕೆ ಸಂಬಂಧಿಸಿದಂತೆ ಏಪ್ರಿಲ್ 18 ಹಾಗೂ ಏಪ್ರಿಲ್ 25ರಂದು ನಡೆದ ವಿಚಾರಣೆ ವೇಳೆ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಏಪ್ರಿಲ್ 18 ರಂದು ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಕೋರಿತ್ತು. ಆದರೆ, ಇಂದು ಬೊಮ್ಮಾಯಿ ಅವರ ಸರ್ಕಾರ ತನ್ನ ಮೀಸಲಾತಿ ಹೆಚ್ಚಳದ ಆದೇಶವನ್ನು ಸಮರ್ಥಿಸಿಕೊಳ್ಳಲು ವಿಫಲವಾಗಿದೆ.

ಅಷ್ಟೇ ಅಲ್ಲದೆ, ನ್ಯಾಯಾಲಯದಲ್ಲಿ ತನ್ನ ಆದೇಶಕ್ಕೆ ತಾನೇ ತಡೆಯಾಜ್ಞೆ ಕೊಟ್ಟಿದೆ. ಆ ಮೂಲಕ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ಕ್ಷಮಿಸಲಾರದ ತಪ್ಪು ಮಾಡಿದೆ. ಬಿಜೆಪಿ ಸರ್ಕಾರ ಮೀಸಲಾತಿ ಹೆಸರಿನಲ್ಲಿ ಮಾಡುತ್ತಿರುವ ಮೋಸ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷ ಹೇಳಿದ್ದು ನಿಜವಾಗಿದೆ. ಬಿಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಈ ಸಮುದಾಯಗಳಿಗೆ ಲಾಲಿಪಾಪ್ ಕೊಟ್ಟು ಮೋಸ ಮಾಡುವ ಷಡ್ಯಂತ್ರ ರೂಪಿಸಿದೆ. ಸರ್ಕಾರದ ಈ ಆದೇಶ ಕಾನೂನು ಪ್ರಕಾರ ಜಾರಿಯಾಗುವುದಿಲ್ಲ ಹಾಗೂ ಸಂವಿಧಾನಾತ್ಮಕವಾಗಿ ಸಿಂಧುವಾಗುವುದಿಲ್ಲ. ಇದೆಲ್ಲದರ ಪರಿಣಾಮ ನ್ಯಾಯಾಲಯದಲ್ಲಿ ಕಾನೂನು ಸಮರಕ್ಕೆ ಕಾರಣವಾಗುತ್ತದೆ. ಈ ಸಮಯದಲ್ಲಿ ಬಿಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಕ್ರೆಡಿಟ್ ಪಡೆದು, ಮತಬ್ಯಾಂಕ್ ರಾಜಕಾರಣ ಮಾಡುತ್ತದೆ ಎಂದು ದೂರಿದ್ದಾರೆ.

ತನ್ನ ಆದೇಶವನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲಾಗದ ಬೊಮ್ಮಾಯಿ ಅವರೂ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ 40 ಪರ್ಸೆಂಟ್​​ ಕಮಿಷನ್ ಹಾಗೂ ವಿಫಲವಾದ ಡಬಲ್ ಇಂಜಿನ್ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ 9 ಪ್ರಶ್ನೆಗಳನ್ನು ಕೇಳ ಬಯಸುತ್ತದೆ ಎಂದು ಹೇಳಿರುವ ಅವರು ತಮ್ಮ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅದೇ ರೀತಿ ಹಲವು ಸತ್ಯ ಸಂಗತಿಗಳು ಎಂದು ವಿವಿಧ ವಿಚಾರಗಳನ್ನು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಸರ್ಕಾರ ಮೀಸಲಾತಿ ಹೆಸರಿನಲ್ಲಿ ಎಲ್ಲಾ ವರ್ಗದ ಜನರಿಗೆ ದ್ರೋಹ ಬಗೆದಿದ್ದು, ರಾಜ್ಯದ ಜನ ಈ 40 ಪರ್ಸೆಂಟ್​​​ ಸರ್ಕಾರವನ್ನು ಮುಂದಿನ ದಿನಗಳಲ್ಲಿ ಬಡಿದೋಡಿಸಲಿದೆ. ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯಲ್ಲಿ ರಾಜ್ಯದ ಜನ 40ಕ್ಕಿಂತ ಹೆಚ್ಚಿನ ಕ್ಷೇತ್ರವನ್ನು ಬಿಜೆಪಿ ನೀಡುವುದಿಲ್ಲ ಎಂದು ಗೌರವ್​​ ವಲ್ಲಭ್​ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ಶೇ.4 ಮೀಸಲಾತಿ ರದ್ದುಗೊಳಿಸಿರುವ ನಿರ್ಧಾರ ಮೇ 9ರವರೆಗೆ ಜಾರಿ ಇಲ್ಲ: ಸುಪ್ರೀಂಕೋರ್ಟ್​ಗೆ ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.