ETV Bharat / state

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹ: ನಾಳೆ ವಿಧಾನಸೌಧ ಚಲೋ - ಸಾರಿಗೆ ನೌಕರರ ಆಗ್ರಹ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ತೆರಳಿ ವಿಧಾನಸೌಧವನ್ನು ಮುತ್ತಿಗೆ ಹಾಕಲಿದ್ದಾರೆ.‌‌

banglore
ಸಿಐಟಿಯು ಕಾರ್ಯದರ್ಶಿ
author img

By

Published : Dec 9, 2020, 7:35 PM IST

ಬೆಂಗಳೂರು: ರೈತರ ಪ್ರತಿಭಟನೆ ಬೆನ್ನಲ್ಲೇ ಸರ್ಕಾರಕ್ಕೆ ಇದೀಗ ಸಾರಿಗೆ ನೌಕರರ ಪ್ರತಿಭಟನೆ ಬಿಸಿ ತಟ್ಟಲಿದೆ. ನಾಳೆ ಕೆಎಸ್ಆರ್​ಟಿಸಿ, ಬಿಎಂಟಿಸಿ ಸ್ತಬ್ಧವಾಗುತ್ತಾ ಎನ್ನುವ ಪ್ರಶ್ನೆ ಕಾಡುತ್ತಿದೆ. ನಾಳೆ ಸಾರಿಗೆ ನೌಕರರಿಂದ ವಿಧಾನಸೌಧವನ್ನು ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿದ್ದಾರೆ.

ಸಿಐಟಿಯು ಕಾರ್ಯದರ್ಶಿ ಆನಂದ್​

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ತೆರಳಿ ವಿಧಾನಸೌಧವನ್ನು ಮುತ್ತಿಗೆ ಹಾಕಲಿದ್ದಾರೆ.‌‌ ನಾಳೆ ರಾಜ್ಯದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ಸುಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಸಮಯಕ್ಕೆ ಸರಿಯಾಗಿ ಬಸ್ಸುಗಳು ಸಿಗದೇ ಇರಬಹುದು. ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದು, ಇವರ ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

banglore
ವಿಧಾನಸೌಧ ಚಲೋ

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳು:

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು. ಸರ್ಕಾರಿ ನೌಕರರಿಗೆ ನೀಡುವಂತಹ ಸವಲತ್ತುಗಳನ್ನು ಸಾರಿಗೆ ನೌಕರರಿಗೂ ನೀಡಬೇಕು. ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ನೌಕರರಿಗೆ ಘೋಷಣೆ ಮಾಡಿದ್ದ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಇನ್ನು ನಾಳೆ ಸಾರಿಗೆ ನೌಕರರಿಂದ ವಿಧಾನಸೌಧ ಚಲೋ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವನ್ನು ಬಿಎಂಟಿಸಿ ಕೈಗೊಂಡಿದೆ.

ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದ್ದು, ನಾಳೆ ಎಲ್ಲಾ ನೌಕರರಿಗೆ ರಜೆ ಕಡಿತ ಮಾಡಿದೆ. ನೌಕರರು ಗೈರು ಹಾಜರು ಆದರೆ ಸಂಬಳ ಕಡಿತದ ಎಚ್ಚರಿಕೆ ನೀಡಿದೆ. ವಾರದ ರಜೆ, ದೀರ್ಘಾವಧಿ ರಜೆ ನೌಕರರಿಗೆ ಇದು ಅನ್ವಯ ಇಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.