ಬೆಂಗಳೂರು: ಕೋವಿಡ್ ಕಾರಣದಿಂದ ಈ ವರ್ಷ ಶಾಲೆಗಳು ನಿಗದಿತ ಸಮಯಕ್ಕೆ ಆರಂಭವಾಗಿಲ್ಲ. ಇತ್ತ ತರಗತಿಗಳು ಆರಂಭವಾಗಿಲ್ಲ, ಈ ಕಾರಣದಿಂದ ಶಾಲಾ ಫೀಸ್ ಕಟ್ಟಲು ಆಗೋದಿಲ್ಲ ಅಂತ ಪೋಷಕರು ಖಾಸಗಿ ಶಾಲೆಗಳ ವಿರುದ್ಧ ಕಿಡಿಕಾರಿದ್ದಾರೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಮಗೆ ಶುಲ್ಕ ವಿನಾಯಿತಿ ಅಥವಾ ಏಕ ರೂಪದ ಶುಲ್ಕ ನಿಗದಿ ಮಾಡಬೇಕು, ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಸಾಲು ಸಾಲು ಮುಷ್ಕರ ನಡೆಸಿದರು.
ಖಾಸಗಿ ಶಾಲೆಗಳ ಶುಲ್ಕ ನಿಗದಿ ಸಂಬಂಧ ಸರ್ಕಾರ ಇಂದು ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕೋವಿಡ್ ಸಂಕಷ್ಟದಲ್ಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಪೂರ್ತಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಪೋಷಕರಿಂದ ಬಂದಿತ್ತು. ಇತ್ತ ಮಕ್ಕಳನ್ನು ಶಾಲೆಗೆ ಸೇರಿಸುತ್ತಿಲ್ಲ ಹಾಗೂ ಶುಲ್ಕ ಪಾವತಿ ಮಾಡುತ್ತಿಲ್ಲ ಎಂಬ ಆರೋಪ ಆಡಳಿತ ಮಂಡಳಿಗಳಿಂದ ಬಂದಿತ್ತು.
ಈ ಕಾರಣಕ್ಕಾಗಿ ಪೋಷಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸಭೆ ಕರೆದು ಚರ್ಚೆ ನಡೆಸಿದ್ದರು. ಅದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಿದ್ದಾರೆ. ಈ ವರದಿಯನ್ನ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು ಪರಾಮರ್ಶೆ ಮಾಡಿ, ಅಂತಿಮ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ.
ಓದಿ : ವಿದೇಶಕ್ಕೆ ಮೊದಲ ಕೋವಿಡ್ ಲಸಿಕೆ ರವಾನೆ: ಭೂತಾನ್ಗೆ 1.5 ಲಕ್ಷ ಡೋಸ್ ವ್ಯಾಕ್ಸಿನ್ ಕಳುಹಿಸಿದ ಭಾರತ!