ETV Bharat / state

ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ: ಡಿಸಿಎಂ ಲಕ್ಷ್ಮಣ ಸವದಿ

ಕೋವಿಡ್ ಕಾರಣದಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ನಿಗಮಗಳಿಂದಲೂ ವೇತನ ನೀಡಲು ಸಾಧ್ಯವಾಗಲಿಲ್ಲ. ಸರ್ಕಾರವೇ 1,760 ಕೋಟಿ ಹಣ ಬಿಡುಗಡೆ ಮಾಡಿತು. ಡಿಸೆಂಬರ್​ನಲ್ಲಿ ಅರ್ಧ ವೇತನವನ್ನು ನೀಡಲಾಗಿದೆ. ಜನವರಿಯಲ್ಲಿ ಇನ್ನೂ ವೇತನವನ್ನು ಕೊಟ್ಟಿಲ್ಲ ಎಂದರು.

-lakshman-savadi
ಡಿಸಿಎಂ ಲಕ್ಷ್ಮಣ ಸವದಿ
author img

By

Published : Feb 3, 2021, 5:32 PM IST

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಕೋವಿಡ್ ಬಂದ ಕಾರಣ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಹೆಚ್.ಡಿ.ರೇವಣ್ಣ ಪರವಾಗಿ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ ಮಾಡಿಕೊಳ್ಳಬಹುದೇ ಹೊರತು ನೌಕರರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಇಲಾಖೆಯ ದುಸ್ಥಿತಿಯನ್ನು ಬಿಚ್ಚಿಟ್ಟರು.

ಕೋವಿಡ್ ಕಾರಣದಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ನಿಗಮಗಳಿಂದಲೂ ವೇತನ ನೀಡಲು ಸಾಧ್ಯವಾಗಲಿಲ್ಲ. ಸರ್ಕಾರವೇ 1,760 ಕೋಟಿ ಹಣ ಬಿಡುಗಡೆ ಮಾಡಿತು. ಡಿಸೆಂಬರ್​ನಲ್ಲಿ ಅರ್ಧ ವೇತನವನ್ನು ನೀಡಲಾಗಿದೆ. ಜನವರಿಯಲ್ಲಿ ಇನ್ನೂ ವೇತನವನ್ನು ಕೊಟ್ಟಿಲ್ಲ ಎಂದರು.

ಇದನ್ನೂ ಓದಿ: ಜಾಮೀನಿನ ಮೇಲೆ ಹೊರಗಿರುವ ಯಡಿಯೂರಪ್ಪ ಸಿಎಂ ಹುದ್ದೆಯಲ್ಲಿ ಮುಂದುವರೆಯುವುದು ಸರಿಯೇ: ಸಿದ್ದರಾಮಯ್ಯ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.