ಬೆಂಗಳೂರು : ರಾಜ್ಯಾದ್ಯಂತ ಮಾರ್ಚ್ 27ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಮನೆಗೆ ದಿಢೀರ್ ಭೇಟಿ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧರಾಗುತ್ತಿರುವ ಕೆಲ ವಿದ್ಯಾರ್ಥಿಗಳ ಮನೆಗೆ ಹೋಗಿ ಅವರೊಡನೆ ಮಾತನಾಡಿ ಶುಭ ಹಾರೈಸಿದ್ದಾರೆ. ಅಲ್ಲದೇ ಇದು ನನ್ನ ವಾರ್ಷಿಕ ಕಾರ್ಯಕ್ರಮ. ಕಳೆದ ನಾಲ್ಕೈದು ವರ್ಷಗಳಿಂದ ಈ ಕಾರ್ಯವನ್ನು ಮಾಡಿಕೊಂಡು ಬಂದಿದ್ದೇನೆ. ಈ ವರ್ಷ ನನ್ನ ಕ್ಷೇತ್ರದಲ್ಲಿ ಸುಮಾರು 350ಕ್ಕೂ ಹೆಚ್ಚು ಮಕ್ಕಳ ಮನೆಗೆ ಹೋಗುವುದಾಗಿ ತಿಳಿಸಿದ್ದಾರೆ.