ETV Bharat / state

Bitcoin Scam:ಬಿಟ್ ಕಾಯಿನ್ ಹಗರಣದ ಹಿಂದಿನ ತನಿಖಾಧಿಕಾರಿಗಳ ವಿರುದ್ಧವೇ ಎಫ್ಐಆರ್

Bitcoin Scam: ಸಿಐಡಿಯ ವಿಶೇಷ ತನಿಖಾ ತಂಡ ಬಿಟ್ ಕಾಯಿನ್ ಹಗರಣದ ತನಿಖೆ ಆರಂಭಿಸಿದ್ದು, ಪ್ರಕರಣದ ಹಿಂದಿನ ತನಿಖಾಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಿಸಿವೆ.

ಬಿಟ್ ಕಾಯಿನ್
ಬಿಟ್ ಕಾಯಿನ್
author img

By

Published : Aug 11, 2023, 12:02 PM IST

ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆ ಆರಂಭಿಸಿರುವ ಸಿಐಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಕರಣದ ಹಿಂದಿನ ತನಿಖಾಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಿಸಿದೆ. ಎಸ್ಐಟಿ ತನಿಖಾಧಿಕಾರಿ ಕೆ.ರವಿಶಂಕರ್​ ನೀಡಿರುವ ದೂರಿನ ಅನ್ವಯ ಪ್ರಕರಣದ ಹಿಂದಿನ ತನಿಖಾಧಿಕಾರಿಗಳು ಮತ್ತವರ ತಂಡದ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ಸಂದರ್ಭದಲ್ಲಿ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್‌ಗಳು, ಹಾರ್ಡ್ ಡಿಸ್ಕ್, ಪೆನ್ ಡ್ರೈವ್​ಗಳನ್ನು ವಶಕ್ಕೆ ಪಡೆದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ವಶಕ್ಕೆ ನೀಡಲಾಗಿತ್ತು.

ಸದ್ಯ ಆ ದಾಖಲೆಗಳನ್ನು ಎಸ್ಐಟಿ ತಂಡ ವಶಕ್ಕೆ ಪಡೆದಿದ್ದು, ಮೂಲ ಫೈಲ್ ಅಲ್ಲದೇ ಹೆಚ್ಚುವರಿ ಫೈಲ್ಸ್ ಸೃಷ್ಟಿಸಿರುವುದು ಕಂಡು ಬಂದಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರ ತಂಡದಿಂದಲೇ ಸಾಕ್ಷ್ಯಗಳನ್ನು ತಿರುಚಲಾಗಿದ್ದು, ಸಿಸಿಬಿ ಕಚೇರಿ ಹಾಗೂ ಮತ್ತಿತರ ಕಡೆಗಳಲ್ಲಿ ಸೆಪ್ಟೆಂಬರ್ 9, 2020 ರಿಂದ ಡಿಸೆಂಬರ್ 16, 2020 ರ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಸಿಸಿಬಿ ತನಿಖಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಒಳಸಂಚು ರೂಪಿಸಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪ ಸದ್ಯ ಕೇಳಿ ಬಂದಿದೆ. ಈ ಬಗ್ಗೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿ ಹರಡದಂತೆ ಸೂಕ್ತ ಕಾನೂನು - ಜಿ ಪರಮೇಶ್ವರ್​: ಬಿಟ್​ ಕಾಯಿನ್​ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಜೊತೆಗೆ, ಫೇಕ್ ನ್ಯೂಸ್ ಹರಡುವುದರಲ್ಲಿ ಕೆಲವರು ನಿರತರಾಗಿದ್ದಾರೆ. ಅದು ರಾಜಕೀಯ ಇರಬಹುದು ಅಥವಾ ಸಮಾಜದ ಶಾಂತಿ ಕದಡುವ ವಿಚಾರ ಇರಬಹುದು. ಸುಳ್ಳು ಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದನ್ನು ಗಮನಿಸಿದ್ದೇವೆ.

ಸಂಬಂಧವೇ ಇಲ್ಲದ ಫೋಟೋಗಳನ್ನು ಹಾಕಿ ಸಂಬಂಧ ಕಲ್ಪಿಸುವುದು ನಡೆಯುತ್ತಿದೆ. ಸರ್ಕಾರ ರಚನೆ ಆದ ಮೇಲೆ ಫೇಕ್ ನ್ಯೂಸ್ ಗಮನಿಸಿದ್ದೇವೆ. ಇದನ್ನು ನಿಲ್ಲಿಸದಿದ್ದರೆ ಬಹಳಷ್ಟು ಸಮಸ್ಯೆ ಆಗಲಿದೆ. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. ಸೈಬರ್ ಲಾನಲ್ಲಿ ಅಮೆಂಡ್ಮೆಂಟ್ ಮಾಡಬೇಕಾಗುತ್ತದೆ. ಸೈಬರ್ ಲಾ ನಲ್ಲಿ ಅವಕಾಶ ಇದ್ದರೆ ಕ್ರಮ ಕೈಗೊಳ್ಳುತ್ತೇವೆ.

ಆರ್ಟಿಫಿಶಿಯಲ್ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸುಳ್ಳು ಸುದ್ದಿ ಹರಡುವವರ ಮೇಲೆ ಶಿಕ್ಷೆಗೆ ಸೂಕ್ತ ಕಾನೂನು ಕೂಡ ತರುತ್ತೇವೆ. ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆಯೋ ಅವುಗಳನ್ನು ತನಿಖೆ ಮಾಡಿಸುತ್ತೇವೆ. ಪಿಎಸ್ಐ ಪ್ರಕರಣ ಸಂಬಂಧ ಕೋರ್ಟ್ ಜಡ್ಡ್ ಮೆಂಟ್ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ: ಡಾ. ಜಿ.ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.