ETV Bharat / state

ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ಕ್ರಮ ಸಮರ್ಥಿಸಿಕೊಂಡ ಸರ್ಕಾರ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿದ್ದ ಒಟ್ಟು 570 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದ ಕ್ರಮ ಕಾನೂನು ಬಾಹಿರ ಎಂದು ಆರೋಪಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹಾಗೂ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Highcourt
ಹೈಕೋರ್ಟ್​
author img

By

Published : Jun 17, 2021, 10:02 PM IST

ಬೆಂಗಳೂರು: ಶಾಸಕರು, ಸಚಿವರು ಹಾಗೂ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಿಂಪಡೆಯಲಾಗಿದೆ ಎಂದು ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿದ್ದ ಒಟ್ಟು 570 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಕ್ರಮ ಕಾನೂನು ಬಾಹಿರ ಎಂದು ಆರೋಪಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹಾಗೂ ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರಿ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಕೋರಿಕೆಗೆ ಸಮ್ಮತಿಸಿದ ಪೀಠ ವಿಚಾರಣೆ ಮುಂದೂಡಿತು.

ಸರ್ಕಾರದ ಆಕ್ಷೇಪಣೆಯ ಸಾರಾಂಶ :
ಕಾವೇರಿ, ಮಹಾದಾಯಿ ನದಿ ನೀರು ಹಂಚಿಕೆ ವಿಚಾರ, ಮಂಡ್ಯದಲ್ಲಿ ಕಬ್ಬು ಬೆಳೆಗೆ ಬೆಂಬಲ ನಿಗದಿ, ಸಕ್ಕರೆ ಕಾರ್ಖಾನೆಯಿಂದ ಬಾಕಿ ಹಣ ಪಾವತಿ ವಿಚಾರ, ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ, ಆದಿವಾಸಿಗಳ ಒಕ್ಕಲೆಬ್ಬಿಸಿದ ವಿಚಾರ, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹನುಮ ಜಯಂತಿ ಆಚರಣೆ ಸಂಬಂಧ, ಚಿಕ್ಕಮಗಳೂರಿನ ದತ್ತಪೀಠ ವಿವಾದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಪ್ರತಿಭಟನೆ-ಮುಷ್ಕರಗಳು ನಡೆದಿದ್ದವು.

ಈ ಸಂಬಂಧ ರೈತರು, ರೈತ ನಾಯಕರು, ಶಾಸಕರು ಮತ್ತು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಇಂತಹ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

ಅಲ್ಲದೆ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಗೊಳ್ಳಲಿ ಎಂಬ ಸದುದ್ದೇಶದಿಂದ ಈ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸರ್ಕಾರದ ಈ ಕ್ರಮ ಸಿಆರ್‌ಪಿಸಿ ಸೆಕ್ಷನ್ 321ರ ಪ್ರಕಾರ ಸಂಬಂಧಪಟ್ಟ ನ್ಯಾಯಾಲಯದ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.

ಆದರೆ, ಸೆಕ್ಷನ್ 321ನ್ನು ಉಲ್ಲಂಘಿಸಿಲ್ಲ. ಅಪರಾಧ ನ್ಯಾಯ ಆಡಳಿತವನ್ನು ದುರ್ಬಲಗೊಳಿಸಿಲ್ಲ ಮತ್ತು ನ್ಯಾಯಾಲಯದ ಅಧಿಕಾರವನ್ನು ಅತಿಕ್ರಮಿಸಿಲ್ಲ. ಆದ್ದರಿಂದ, ಕೆಲ ಆರೋಪಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಕ್ರಿಮಿನಲ್ ಪ್ರಕರಣ ಹಿಂಪಡೆಯಲಾಗಿದೆ ಎಂಬ ಅರ್ಜಿದಾರರ ಆರೋಪದಲ್ಲಿ ಹುರುಳಿಲ್ಲ. ಹೀಗಾಗಿ ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಸರ್ಕಾರ ತನ್ನ ಆಕ್ಷೇಪಣೆಯಲ್ಲಿ ಸಮರ್ಥನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.