ಬೆಂಗಳೂರು: ಐಎಂಎ ಜ್ಯುವೆಲ್ಲರಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಬದಲು ವಿಶೇಷ ತನಿಖಾ ತಂಡಕ್ಕೆ ವಹಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಐಎಂಎ ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದ್ದು, ಈ ಸಂಬಂಧ ಡಿಜಿಪಿಗೆ ನಿರ್ದೇಶನವನ್ನು ನೀಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಬೆಳಗ್ಗೆಯಷ್ಟೇ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಅರ್ಥ ಮಾಡಿಕೊಂಡಿದ್ದು, ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವ ಎಂ.ಬಿ ಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಟ್ವೀಟ್ ಮಾಡಿದ್ದರು. ಇದಾದ ನಂತರ ಸಚಿವ ಜಮೀರ್ ಅಹಮದ್ ತನಿಖೆಯನ್ನು ಎಸ್ಐಟಿಗೆ ವಹಿಸುವಂತೆ ಒತ್ತಾಯಿಸಿದ್ದರು. ನಂತರದಲ್ಲಿ ಸಿಎಂ ಮತ್ತೊಂದು ಟ್ವೀಟ್ ಮಾಡಿ ತನಿಖೆಯನ್ನು ಎಸ್ಐಟಿಗೆ ವಹಿಸಿರುವುದಾಗಿ ತಿಳಿಸಿದ್ದಾರೆ.