ETV Bharat / state

ಸರ್ಕಾರಿ ಅಧಿಕಾರಿಗಳು ಪತ್ರಿಕಾಗೋಷ್ಟಿ ನಡೆಸಲು ನಿರ್ಬಂಧ ಹೇರಿದ ಸರ್ಕಾರ

ವ್ಯತಿರಿಕ್ತವಾಗಿ ಯಾವುದೇ ಅಧಿಕಾರಿ ಸರ್ಕಾರದ ಕಾರ್ಯನೀತಿಗೆ ವ್ಯತಿರಿಕ್ತವಾಗಿ ಅನಪೇಕ್ಷಿತ ವೇದಿಕೆಗಳಲ್ಲಿ ತಮ್ಮದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಸೂಚನೆ‌ ನೀಡಲಾಗಿದೆ.

ಸರ್ಕಾರಿ ಅಧಿಕಾರಿಗಳು ಪತ್ರಿಕಾಗೋಷ್ಟಿ ನಡೆಸಲು ನಿರ್ಬಂಧ ಹೇರಿ ಸರ್ಕಾರ

author img

By

Published : Sep 19, 2021, 2:51 AM IST

ಬೆಂಗಳೂರು: ಅಧಿಕಾರಿಗಳು ಪತ್ರಿಕಾ ಗೋಷ್ಠಿ ನಡೆಸುವುದರವಿರುದ್ಧ ನಿರ್ಭಂಧವನ್ನು ಹೇರಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಶಾಸಕ ಸಾ.ರಾ.ಮಹೇಶ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಚ್ಚಾಟ ಸಾರ್ವಜನಿಕವಾಗಿ ಮುನ್ನಲೆಗೆ ಬಂದ ಹಿನ್ನೆಲೆ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ಸುತ್ತೋಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಪತ್ರಿಕಾ ಗೋಷ್ಠಿ ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಪ್ರಸಂಗಗಳು ಸರ್ಕಾರದ ಆಡಳಿತ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತವೆ ಹಾಗೂ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡುವುದರಿಂದ ಅಧಿಕಾರಿಗಳ ಇಂತಹ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಅಧಿಕಾರಿಯು ನಂಬಿಕಾರ್ಹ, ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿದೆ.

ವ್ಯತಿರಿಕ್ತವಾಗಿ ಯಾವುದೇ ಅಧಿಕಾರಿ ಸರ್ಕಾರದ ಕಾರ್ಯನೀತಿಗೆ ವ್ಯತಿರಿಕ್ತವಾಗಿ ಅನಪೇಕ್ಷಿತ ವೇದಿಕೆಗಳಲ್ಲಿ ತಮ್ಮದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಸೂಚನೆ‌ ನೀಡಲಾಗಿದೆ.

ಸರ್ಕಾರಿ ಯೋಜನೆಗಳು ಇತ್ಯಾದಿಗಳಿಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿಯನ್ನು ಪ್ರಸಾರ ಮಾಡುವುದು ಸೇರಿದಂತೆ ಇತರ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಅಗತ್ಯವಿದ್ದಲ್ಲಿ ಮಾತ್ರ ಅಧಿಕಾರಿಗಳು ಮಾಧ್ಯಮಗಳನ್ನು ಬಳಸಬಹುದಾಗಿದೆ. ಆದರೆ, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಇದನ್ನು ಓದಿ:ನೆರೆ ಪರಿಹಾರ ಲೆಕ್ಕಾಚಾರ: ಕಳೆದ ಮೂರು ವರ್ಷಗಳಲ್ಲಿ ಸಂತ್ರಸ್ತರಿಗೆ ಸಿಕ್ಕಿದ್ದೆಷ್ಟು?

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.