ETV Bharat / state

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ₹13 ಕೋಟಿ ಪರಿಹಾರ ಬಿಡುಗಡೆ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ - Release of Rs 13 crore to State Legal Services Authority

ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ಪರಿಹಾರ ಮೊತ್ತ ಪಾವತಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 13 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಸರ್ಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಸಂತ್ರಸ್ತೆಯರಿಗೆ ಎಷ್ಟು ಪರಿಹಾರ ವಿತರಿಸಲಾಗಿದೆ ಎಂಬ ವಿವರ ಒಳಗೊಂಡ ಮೆಮೋ ಸಲ್ಲಿಸಲಾಗಿದೆ.

ಹೈಕೋರ್ಟ್‌
ಹೈಕೋರ್ಟ್‌
author img

By

Published : Jan 25, 2022, 9:20 PM IST

ಬೆಂಗಳೂರು: ಸಂತ್ರಸ್ತರ ಪರಿಹಾರ ಯೋಜನೆ ಅಡಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಸಂತ್ರಸ್ತರಿಗೆ ಪರಿಹಾರ ಮೊತ್ತ ಪಾವತಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಸ್‌ಎಲ್‌ಎಸ್‌ಎ) 13 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಅತ್ಯಾಚಾರ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಸೂಕ್ತ ಮಾರ್ಗಸೂಚಿ ರಚಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಪೀಪಲ್ಸ್ ಮೂವ್‌ಮೆಂಟ್ ಅಗೇನಸ್ಟ್ ಸೆಕ್ಷ್ಯುಯಲ್ ಅಸಾಲ್ಟ್ (ಪಿಎಂಎಎಸ್‌ಎ) ಎಂಬ ಮಹಿಳಾ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಇದನ್ನೂ ಓದಿ: USA ತಂಡದಲ್ಲಿ ಸ್ಥಾನ ಪಡೆದ ಕಾಫಿ ನಾಡಿನ ಈ ಪ್ರತಿಭೆಗೆ ಬೆಂಗಳೂರಲ್ಲಿ ವಿಶ್ವಕಪ್​ ಪಂದ್ಯವನ್ನಾಡುವ ಆಸೆ!

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ರಾಜಶೇಖರ್ ವಾದ ಮಂಡಿಸಿ, ಸಂತ್ರಸ್ತರ ಪರಿಹಾರ ಯೋಜನೆ ಜಾರಿಗೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 20 ಕೋಟಿ ರೂ. ಬಿಡುಗಡೆ ಮಾಡಲು 2020ರ ಮಾ.19ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ, ಈವರೆಗೂ ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದ 7 ಕೋಟಿ ರೂ. ಹಣವನ್ನು ಮನವಿ ಬಂದ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರು, ಸರ್ಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಸಂತ್ರಸ್ತೆಯರಿಗೆ ಎಷ್ಟು ಪರಿಹಾರ ವಿತರಿಸಲಾಗಿದೆ ಎಂಬ ವಿವರ ಒಳಗೊಂಡ ಮೆಮೋ ಸಲ್ಲಿಸಲಾಗಿದೆ. ಅಲ್ಲದೇ, 15 ಕೋಟಿ ರೂ. ಹಣ ಬಿಡುಗಡೆ ಕೋರಿ ಜ.10ರಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಬಾಕಿ 7 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಪ್ರಧಾನ ಕಾರ್ಯದರ್ಶಿ ಹಾಜರು: ಸಂತ್ರಸ್ತ ಪರಿಹಾರ ಯೋಜನೆ ಅಡಿಯಲ್ಲಿ 2020-21ನೇ ಸಾಲಿನಲ್ಲಿ ಪರಿಹಾರ ವಿತರಿಸಲು ಕೆಎಸ್‌ಎಲ್‌ಎಸ್‌ಎಗೆ ಹಣ ಬಿಡುಗಡೆ ಮಾಡಿದ ಬಗ್ಗೆ ವರದಿ ಸಲ್ಲಿಸಬೇಕು. ತಪ್ಪಿದರೆ ಮುಂದಿನ ವಿಚಾರಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿರಬೇಕು ಎಂದು ಹೈಕೋರ್ಟ್ ಜ.4ರಂದು ನಿರ್ದೇಶಿಸಿತ್ತು. ಅದರಂತೆ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಮಂಜುಳಾ ವಿಸಿ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.