ETV Bharat / state

ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ, 3ನೇ ಅಲೆಗೆ ಸರ್ಕಾರದಿಂದ ಸರ್ವಸಿದ್ಧತೆ: ಡಿಸಿಎಂ - ಡಿಸಿಎಂ ಅಶ್ವತ್ಥ ನಾರಾಯಣ ಹೇಳಿಕೆ

ನಗರದ ಶೇಷಾದ್ರಿಪುರ ಮಾರುತಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ಮತ್ತು ನೂತನ ಆಸ್ಪತ್ರೆಯ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.‌‌ ಈ ಕಾರ್ಯಕ್ರಮದಲ್ಲಿ ಡಿಸಿಎಂ‌‌ ಅಶ್ವತ್ಥ ನಾರಾಯಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

The Government is all set for Covid third wave
ಡಿಸಿಎಂ ಅಶ್ವತ್ಥ ನಾರಾಯಣ
author img

By

Published : Jul 14, 2021, 3:48 PM IST

ಬೆಂಗಳೂರು: ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ. ಮೂರನೇ ಅಲೆಯ ಬಗ್ಗೆ ಎಲ್ಲರಿಗೂ ಆತಂಕ ಇರುವುದು ನಿಜ. ಹಾಗಂತ ಹೆದರಬೇಕಿಲ್ಲ. ಆಕ್ಸಿಜನ್‌ ಉತ್ಪಾದನೆ ಮತ್ತು ಸಂಗ್ರಹ, ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು ಸೇರಿ ಎಲ್ಲ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಡಿಸಿಎಂ‌‌ ಅಶ್ವತ್ಥ ನಾರಾಯಣ ಹೇಳಿದರು.

ಡಿಸಿಎಂ ಅಶ್ವತ್ಥ ನಾರಾಯಣ

ಪ್ರತಿ ತಿಂಗಳೂ ಹಂಚಿಕೆಯಾಗುವ ವ್ಯಾಕ್ಸಿನ್‌ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ ಮಾಸಿಕ 60 ಲಕ್ಷ ಲಸಿಕೆ ಹಂಚಿಕೆಯಾಗುತ್ತಿದೆ. ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ. ಈ ಹಂಚಿಕೆ ಆಧಾರದಲ್ಲಿಯೇ ರಾಜ್ಯ ಸರ್ಕಾರ ತಿಂಗಳಿಗೆ ರಾಜ್ಯಾದ್ಯಂತ 60 ಲಕ್ಷ ಜನರಿಗೆ ಲಸಿಕೆ ನೀಡುತ್ತಿದೆ ಎಂದರು.

ಕಳೆದ ಜೂನ್‌ ತಿಂಗಳಲ್ಲಿ 60 ಲಕ್ಷ ಜನರಿಗೆ ಲಸಿಕೆ ಕೊಡಲಾಗಿತ್ತು. ಈ ತಿಂಗಳಲ್ಲೂ ಅಷ್ಟೇ ಪ್ರಮಾಣದ ಜನರಿಗೆ ವ್ಯಾಕ್ಸಿನ್‌ ಕೊಡಲಾಗುವುದು. ಇನ್ನೂ ಹೆಚ್ಚು ಪ್ರಮಾಣದಲ್ಲಿ ಲಸಿಕೀಕರಣ ಮಾಡಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕೋವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆಗಳನ್ನು ಕೊಡಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಲಸಿಕೆಗಾಗಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ, ಲಸಿಕೆ ಕಂಪನಿಗಳಿಗೆ ಉತ್ಪಾದನೆ ಹೆಚ್ಚಿಸುವಂತೆ ಕೋರಲಾಗಿದೆ. ಜೊತೆಗೆ, ಲಭ್ಯವಾಗುತ್ತಿರುವ ಲಸಿಕೆಯನ್ನೂ ಕ್ಷಮತೆಯಿಂದ ಬಳಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.