ETV Bharat / state

ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ.. ಆರೋಗ್ಯ ಇಲಾಖೆ ಸುತ್ತೋಲೆ - etv bharath kannada news

Dengue cases in Karnataka: ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ
author img

By ETV Bharat Karnataka Team

Published : Sep 21, 2023, 10:37 PM IST

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾರ್ವಜನಿಕರಲ್ಲಿ ರೋಗದ ಕುರಿತು ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಇಲಾಖೆ ಆಯುಕ್ತ ಡಿ ರಂದೀಪ್ ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. ರೋಗ ನಿಯಂತ್ರಣದಲ್ಲಿ ಕೈಜೋಡಿಸುವಂತೆ ಪೌರಾಡಳಿತ ನಿರ್ದೇಶಕರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಘನತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗಿ, ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರ ಜೊತೆಗೆ ತಾಪಮಾನದ ಏರಿಳಿತವು ಜ್ವರ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ವರದಿಯಾಗಿರುವ ಒಟ್ಟು ಪ್ರಕರಣಗಳಲ್ಲಿ ಶೇ. 40 ರಷ್ಟು ಅಧಿಕ ಪ್ರಕರಣಗಳು ನಗರ ಪ್ರದೇಶದಲ್ಲಿ ವರದಿಯಾಗಿದೆ. ನಗರ ಪ್ರದೇಶಗಳಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣವು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದ್ದರೂ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ಸಹಾಯಕರು ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶುಕ್ರವಾರ ನಗರ ಮತ್ತು ಪಟ್ಟಣಗಳ ಕೆಲ ಪ್ರದೇಶಗಳಲ್ಲಿ ಈಡಿಸ್ ಲಾರ್ವಾ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಲಾರ್ವಾ ಉತ್ಪತ್ತಿ ತಾಣಗಳನ್ನೂ ನಾಶ ಮಾಡುತ್ತಿದ್ದಾರೆ. ನಗರ ಪಾಲಿಕೆ, ಪುರಸಭೆ, ನಗರ ಸಭೆ, ಪಟ್ಟಣ ಪಂಚಾಯಿತಿ ವಾರ್ಡ್‌ವಾರು ಕ್ರಿಯಾ ಯೋಜನೆ ಸಿದ್ಧಪಡಿಸಿ, ರೋಗ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ರೋಗ ನಿಯಂತ್ರಣಾ ಕ್ರಮಗಳೇನು ? : ಸಮರ್ಪಕ ಕುಡಿಯುವ ನೀರು ಸರಬರಾಜು ಮತ್ತು ನಿರ್ವಹಣೆ, ಘನ ತ್ಯಾಜ್ಯ ವಸ್ತುಗಳ ಶೀಘ್ರ ವಿಲೇವಾರಿ ಹಾಗೂ ನಿರ್ವಹಣೆ, ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ವಸ್ತುಗಳ ಸಂಗ್ರಹವಾಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಲು ನಾಗರಿಕ ನೀತಿ ಸಂಹಿತೆ ಕಟ್ಟು ನಿಟ್ಟಿನ ಅನುಷ್ಠಾನ, ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ಮತ್ತು ನಿರ್ಮೂಲನೆಗೆ ಸ್ಥಳೀಯ ಸಂಸ್ಥೆಗಳಿಂದ ಕ್ರಮ ವಹಿಸಲು ಸೂಚಿಸಲಾಗಿದೆ.

ಮನೆ, ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ನಡೆಸಿ ನಿರ್ಮೂಲನೆ ಮಾಡುವುದು,
ಸ್ಥಳೀಯ ಸಂಘ ಸಂಸ್ಥೆಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಮಾಡಬೇಕು. ಶಾಲಾ-ಕಾಲೇಜು, ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ಬಸ್ ಡಿಪೋ ಹಾಗೂ ರೈಲು ಮತ್ತು ವಾಹನ ನಿಲ್ದಾಣಗಳು ಸೇರಿ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ನಿರ್ಮೂಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್: ಡೆಂಘಿ ಪ್ರಕರಣಗಳ ನಿಯಂತ್ರಣ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (ಸೆಪ್ಟೆಂಬರ್ 7-2023) ಮಧ್ಯಾಹ್ನ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಪಿಎಂ ಅಧಿಕಾರಿಗಳ ಜೊತೆ ಪಾಲಿಯೆಕ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದರು. ಬೆಂಗಳೂರಿನಲ್ಲೇ ಸುಮಾರು 4427 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು. ಹೀಗಾಗಿ, ಡೆಂಗ್ಯೂ ನಿಯಂತ್ರಣದಲ್ಲಿಡಲು ಮುಂಜಾಗೃತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಅವರು ಈ ವೇಳೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲೇ 4427 ಡೆಂಘಿ ಪ್ರಕರಣಗಳು ಪತ್ತೆ: ಅಧಿಕಾರಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.