ETV Bharat / state

ಹಿಜಾಬ್ ಪ್ರಕರಣ: ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - hearing of the petition challenging the hijab ban

ಹಿಂದಿನ ಕಲಾಪದ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ಇಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಲಿದ್ದಾರೆ.

ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪ್ರಾರಂಭ

author img

By

Published : Feb 14, 2022, 2:43 PM IST

Updated : Feb 14, 2022, 5:08 PM IST

ಬೆಂಗಳೂರು : ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ದಾಖಲಿಸಿರುವ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿ ಬಳಿಕ ನಾಳೆಗೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಶಾಲಾ - ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ನಿರ್ದೇಶಿಸಿದೆ. ವಸ್ತ್ರ ಸಂಹಿತೆ ಜಾರಿ ಮಾಡಿರುವ ಶಾಲೆ-ಕಾಲೇಜುಗಳಿಗೆ ಈ ನಿರ್ಬಂಧ ಅನ್ವಯಿಸಲಿದೆ ಎಂದೂ ಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಕ್ಲಾಸ್​ಗೆ ಎಂಟ್ರಿ: ಎಚ್ಚೆತ್ತು ಹಿಜಾಬ್ ತೆಗೆಸಿದ ಶಿಕ್ಷಕರು

ಹಿಂದಿನ ಕಲಾಪದ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ಇಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಲಿದ್ದಾರೆ.

ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನಿ ಅವರಿರುವ ತ್ರಿಸಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

ಇದೇ ವೇಳೆ, ಮುಖ್ಯ ನ್ಯಾಯಮೂರ್ತಿಗಳು ಮಾಧ್ಯಮಗಳು ಜವಾಬ್ದಾರಿಯುತ ನಡೆದುಕೊಳ್ಳಬೇಕು ಹಾಗೂ ಈ ಬಗ್ಗೆ ನಾವು ಯಾವುದೇ ಅಧಿಕೃತ ನಿರ್ದೇಶನ ನೀಡುವುದಿಲ್ಲ ಎಂದು ಹೇಳಿದ್ದಾರೆ. ನೀವು ಸಂವಿಧಾನದ ನಾಲ್ಕನೇ ಅಂಗವಾಗಿದ್ದು,ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ನೀವು ಸಹಕರಿಸಬೇಕು ಎಂದು ಸಿಜೆ ಮನವಿ ಮಾಡಿದರು.

Last Updated : Feb 14, 2022, 5:08 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.