ETV Bharat / state

ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್​ನಿಂದ​ ಅಂತಿಮ ತೀರ್ಮಾನ: ಡಿಕೆಶಿ

ವಿಧಾನ ಪರಿಷತ್ ಚುನಾವಣೆ ಟಿಕೆಟ್ ಕುರಿತು ನಮಗೆ ಬಂದಿರುವ ಅರ್ಜಿಗಳನ್ನು ಹೈಕಮಾಂಡ್​ಗೆ ಕಳುಹಿಸಲಾಗಿದ್ದು, ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಈ ವಿಚಾರದಲ್ಲಿ ನಮ್ಮ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

author img

By

Published : Jun 16, 2020, 9:58 PM IST

ಡಿ.ಕೆ ಶಿವಕುಮಾರ್
final decision on ticket allocation

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ವಿಧಾನ ಪರಿಷತ್ ಚುನಾವಣೆ ಟಿಕೆಟ್ ಕುರಿತು ನಮಗೆ ಬಂದಿರುವ ಅರ್ಜಿಗಳನ್ನು ಹೈಕಮಾಂಡ್​ಗೆ ಕಳುಹಿಸಲಾಗಿದ್ದು, ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಈ ವಿಚಾರದಲ್ಲಿ ನಮ್ಮ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಎರಡು ಸ್ಥಾನಕ್ಕೆ 200ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಅಚ್ಚರಿಯ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್​

ನಮಲ್ಲಿ ಇರೋದು 2 ಸ್ಥಾನ ಮಾತ್ರ. ಹೀಗಾಗಿ ನಮಗೆ ಯಾರು ಅರ್ಜಿ ಕೊಟ್ಟಿದ್ದರೋ ಅವರೆಲ್ಲರ ಮಾಹಿತಿಯನ್ನು ಹೈಕಮಾಂಡ್​ಗೆ ಕಳುಹಿಸಲಾಗಿದೆ. ಇದು ಕಾರ್ಯಕರ್ತರ ಹಕ್ಕಾಗಿದ್ದು, ಅದನ್ನು ವರಿಷ್ಠರಿಗೆ ಕಳಿಹಿಸುವುದು ನಮ್ಮ ಜವಾಬ್ದಾರಿ. ನಾವು ಅದನ್ನು ಮಾಡಿದ್ದೇವೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಪದಗ್ರಹಣ ಕಾರ್ಯಕ್ರಮವನ್ನು ಜುಲೈ 2ರಂದು ಮಾಡುವುದಾಗಿ ನಾಯಕರು ತಿಳಿಸಿದ್ದಾರೆ. ಅದನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.