ETV Bharat / state

ಪಿಎಸ್‌ಐ ಅಕ್ರಮದ ಆರೋಪಿಗಳ ವಿಚಾರಣೆ: ಇಡಿಗೆ ನೀಡಿದ್ದ ಅನುಮತಿ ರದ್ದುಪಡಿಸಿದ ಹೈಕೋರ್ಟ್

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೊಲೀಸ್ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಡಿ ಹರ್ಷ ವಿರುದ್ಧ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಹರ್ಷ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್
ಹೈಕೋರ್ಟ್
author img

By

Published : Oct 21, 2022, 4:51 PM IST

ಬೆಂಗಳೂರು: ಪೊಲೀಸ್ ಸಬ್ ಇನ್ಸ್​ಪೆಕ್ಟರ್(ಪಿಎಸ್‌ಐ) ನೇಮಕ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಅನುಮತಿ ನೀಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲು ಅನುಮತಿ ಕೋರಿ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಇಡಿ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿದೆ.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೊಲೀಸ್ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಡಿ ಹರ್ಷ ವಿರುದ್ಧ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಹರ್ಷ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಈ ಸೂಚನೆ ನೀಡಿದೆ.

ಅಲ್ಲದೆ, ಆರೋಪಿಗಳ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಲು ಮ್ಯಾಜಿಸ್ಟ್ರೇಷನ್ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ಆದರೆ, ವಿಶೇಷ ನ್ಯಾಯಾಲಯ ಅಥವಾ ಸೆಷನ್ಸ್ ನ್ಯಾಯಾಲಯ ಮಾತ್ರ ಅನುಮತಿ ನೀಡಬಹುದಾಗಿದೆ. ಹೀಗಾಗಿ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಗಳ ವಿಚಾರಣೆಗೆ ಅನುಮತಿ ಕೋರಿ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

ಆರೋಪಿಗಳ ದೊಡ್ಡ ಪ್ರಮಾಣದ ಹಣ ವರ್ಗಾವಣೆ ಮಾಡಿರುವುದನ್ನು ಪತ್ತೆ ಹಚ್ಚಿದ್ದ ಇಡಿ ವಿರುದ್ಧ ತನಿಖೆ ನಡೆಸಲು ಪ್ರಕರಣ ದಾಖಲಿಸಿತ್ತು. ಹೀಗಾಗಿ, ನ್ಯಾಯಾಂಗ ಬಂಧನದಲ್ಲಿರುವ ಅರ್ಜಿದಾರ ಹರೀಶ್ ಮತ್ತು ಇತರೆ ಆರೋಪಿಗಳ ವಿಚಾರಣೆ ನಡೆಸಲು ಅನುಮತಿ ನೀಡಬೇಕು.

ಜತೆಗೆ, ಆರೋಪಿಗಳ ವಿಚಾರಣೆ ನಡೆಸಿ ಲಿಖಿತ ಹೇಳಿಕೆ ದಾಖಲಿಕೊಳ್ಳಲು ಲ್ಯಾಪ್​ ಟಾಪ್ ಮತ್ತು ಪ್ರಿಂಟರ್‌ನೊಂದಿಗೆ ಇಬ್ಬರು ಅಧಿಕಾರಿಗಳು ಜೈಲಿಗೆ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಪುರಸ್ಕರಿಸಿದ್ದ 1ನೇ ಎಸಿಎಂಎಂ ನ್ಯಾಯಾಲಯ 2022ರ ಸೆ. 14ರಂದು ಅನುಮತಿ ನೀಡಿತ್ತು. ಇದನ್ನು ಹರ್ಷ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಪೇಸಿಎಂ ಅಭಿಯಾನ: ಇಬ್ಬರು ಕೈ​ ಮುಖಂಡರ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.