ETV Bharat / state

ಶಿವಾಜಿ ನಗರ, ಶಾಂತಿ ನಗರದಲ್ಲಿ ಮೃತಪಟ್ಟವರು, ಸ್ಥಳಾಂತರಗೊಂಡಿರುವ ಮತದಾರರ ಬಗ್ಗೆ ಕ್ರಮವಹಿಸಿ: ಹೈಕೋರ್ಟ್

ಶಿವಾಜಿ ನಗರ ಮತ್ತು ಶಾಂತಿ ನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಥಳಾಂತರಗೊಂಡಿರುವ ಹಾಗೂ ಮರಣ ಹೊಂದಿರುವ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ 12 ದಿನಗಳಲ್ಲಿ ಕಾಯ್ದೆ ಮತ್ತು ನಿಯಮಗಳ ಅನುಸಾರ ಸೂಕ್ತ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

author img

By

Published : Mar 14, 2023, 11:05 PM IST

High Court
ಹೈಕೋರ್ಟ್

ಬೆಂಗಳೂರು: ಶಿವಾಜಿ ನಗರ ಮತ್ತು ಶಾಂತಿ ನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಥಳಾಂತರಗೊಂಡಿರುವ ಹಾಗೂ ಮರಣ ಹೊಂದಿರುವ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ 12 ದಿನಗಳಲ್ಲಿ ಕಾಯ್ದೆ ಮತ್ತು ನಿಯಮಗಳ ಅನುಸಾರ ಸೂಕ್ತ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಶಿವಾಜಿ ನಗರದ ಬಿಜೆಪಿಯ ಬೂತ್ ಮಟ್ಟದ ಅಧಿಕಾರಿ ಎಂ.ಜಿ. ಪ್ರದೀಪ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿ ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವಿವೇಕ್ ರೆಡ್ಡಿ: ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ರೆಡ್ಡಿ ಅವರು, ಶಿವಾಜಿ ನಗರ ವಿಧಾನಸಭಾ ಕ್ಷೇತ್ರ ಒಂದರಲ್ಲಿ ಸುಮಾರು 26 ಸಾವಿರಕ್ಕೂ ಹೆಚ್ಚು ಮತದಾರರು ಸ್ಥಳಾಂತರಗೊಂಡಿರುವ ಹಾಗೂ ಮರಣ ಹೊಂದಿದ್ದಾರೆ. ಅವರ ಹೆಸರು ಮತದಾರರ ಪಟ್ಟಿಯಲ್ಲಿವೆ. ಅಂತೆಯೇ, ಶಾಂತಿ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 8 ಸಾವಿರದಷ್ಟು ಇಂತಹ ಮತದಾರರ ಹೆಸರುಗಳಿವೆ. ಈ ಕುರಿತ ಮನವಿಗಳನ್ನು ಪರಿಗಣಿಸಿ ತನ್ನ ಕರ್ತವ್ಯ ನಿರ್ವಹಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಈ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು.

ಪ್ರತಿವಾದ ಮಂಡಿಸಿದ ವಕೀಲ ಶಶಿಕಿರಣ ಶೆಟ್ಟಿ: ಪ್ರತಿವಾದಿ ರಿಜ್ವಾನ್ ಅರ್ಷದ್ ಪರ ಹಾಜರಿದ್ದ ಹಿರಿಯ ವಕೀಲ ಶಶಿಕಿರಣ ಶೆಟ್ಟಿ ಅವರು, 2023ರ ಜನವರಿ 15ರಂದು ಮತದಾರರ ಪಟ್ಟಿಯನ್ನು ಪುನರ್ ಪರಿಶೀಲನೆ ಮಾಡಲಾಗಿದೆ. ನಿಯಮಗಳು ಮತ್ತು ಕಾಯ್ದೆಯ ಅನುಸಾರ ಆರು ತಿಂಗಳಿಗೂ ಮುನ್ನ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಬರುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಚುನಾವಣಾ ಆಯೋಗದ ಮಾರ್ಗದರ್ಶಿ ಸೂತ್ರ ನಿಯಮಗಳು ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಅನುಸಾರ ಸೂಕ್ತ ಪರಿಶೀಲನೆ ನಡೆಸಿ ಪ್ರಕರಣಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಿಸಿ. ಈ ಕುರಿತ ನಿರ್ಧಾರವನ್ನು ಇದೇ 26 ರಂದು ಅಥವಾ ಅದಕ್ಕೂ ಮೊದಲು ತೆಗೆದುಕೊಳ್ಳಿ ಎಂದು ಆದೇಶಿಸಿ ಅರ್ಜಿಯನ್ನು ಇತ್ಯರ್ಥ್ಯಪಡಿಸಿತು.

ಚುನಾವಣಾ ಆಯೋಗ: ಶಾಂತಿನಗರ ಕ್ಷೇತ್ರದಲ್ಲಿ 2022ರ ಡಿಸೆಂಬರ್‌ನಲ್ಲಿ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಿದ್ದ ಅರ್ಜಿದಾರರು, ಇಲ್ಲಿ ಸ್ಥಳಾಂತರಗೊಂಡಿರುವ ಹಾಗೂ ಮರಣ ಹೊಂದಿರುವ ಮತದಾರರ ಸಂಖ್ಯೆ ಒಟ್ಟು 8 ಸಾವಿರದಷ್ಟಿದೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ 8 ಸಾವಿರ ಮತದಾರರ ಪೈಕಿ 2,773 ಮತದಾರರು ವರ್ಗಾವಣೆ ಅಥವಾ ಮರಣ ಹೊಂದಿರುವುದು ಕಂಡುಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿತ್ತು.

ಅದೇ ರೀತಿಯಲ್ಲಿ ಶಿವಾಜಿನಗರದಲ್ಲಿ ಪಟ್ಟಿ ಮಾಡಲಾಗಿರುವ 26 ಸಾವಿರದಷ್ಟು ಪ್ರಮಾಣದ ಮತದಾರರು ಸ್ಥಳಾಂತರಗೊಂಡಿದ್ದಾರೆ ಅಥವಾ ಮರಣ ಹೊಂದಿದ್ದಾರೆ ಎನ್ನುವ ಆರೋಪ ಸಂಬಂಧ 11 ಸಾವಿರದಷ್ಟು ಮತದಾರರು ಮರಣ ಹೊಂದಿದ್ದಾರೆ ಮತ್ತು ಇದರಲ್ಲಿ ಕೆಲವರು ಸ್ಥಳಾಂತರಗೊಂಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಪ್ರಾರಂಭಿಸಬೇಕಿದೆ ಎಂದು ಆಯೋಗ ತಿಳಿಸಿತ್ತು.

ಇದನ್ನೂ ಓದಿ: 5, 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ: ವಿವರವಾದ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.