ETV Bharat / state

ಉಡುಪಿ ಪ್ರವೇಶಕ್ಕೆ ನಿಷೇಧ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

2015ರಲ್ಲಿ ವಿಧಿಸಿದ್ದ ನಿಷೇಧಾಜ್ಞೆಯನ್ನು ವಜಾಗೊಳಿಸಿದ ಕರ್ನಾಟಕ ಉಚ್ಛ ನ್ಯಾಯಲಯ - ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ಸಲ್ಲಿಸಿದ್ದ ಅರ್ಜಿ ವಜಾ.

the-high-court-dismissed-the-petition-challenging-the-ban-on-entry-to-udupi
ಉಡುಪಿ ಪ್ರವೇಶಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
author img

By

Published : Jan 9, 2023, 9:42 PM IST

ಬೆಂಗಳೂರು: ಹಿಂದೂ ಸಮಾಜೋತ್ಸವದಲ್ಲಿ ಭಾಗಿಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಏಳು ದಿನಗಳ ಕಾಲ ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸದಂತೆ ಉಡುಪಿ ಜಿಲ್ಲಾಡಳಿತ ಮಾಡಿದ್ದ ನಿಷೇಧಾಜ್ಞೆ ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಗುಜರಾತ್​ ಮೂಲದ ತೊಗಾಡಿಯಾ ಮತ್ತು ಉಡುಪಿಯ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರು ಸಲ್ಲಿಸಿರುವ ಅರ್ಜಿಯು ನಿರರ್ಥವಾಗಿದೆ (ಇನ್ಫ್ರಕ್ಚಿಯಸ್) ಎಂದು ಹೇಳಿ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿಯನ್ನು ವಜಾ ಮಾಡಿದೆ.

ಪ್ರಕರಣದ ಹಿನ್ನೆಲೆ ಏನು? : 2015ರ ಮಾರ್ಚ್ 9 ರಂದು ಹಿಂದೂ ಸಮಾಜೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಕೋಮು ಭಾಷಣ ಮಾಡುವುದು ಮತ್ತು ಸಮಾಜದ ಶಾಂತಿಗೆ ಧಕ್ಕೆ ಉಂಟು ಮಾಡಿ, ಕಾನೂನು ಮತ್ತು ಸುವ್ಯವಸ್ಥೆ ಕದಡುವ ಸಾಧ್ಯತೆಯಿದೆ ಎಂದು ನಿರ್ಬಂಧ ವಿಧಿಸಲಾಗಿತ್ತು.

ಈ ಸಂಬಂಧ ಉಡುಪಿಯ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಯವರು 2015ರ ಮಾರ್ಚ್ 7 ರಿಂದ 13 ರವರೆಗೆ ತೊಗಾಡಿಯಾ ಜಿಲ್ಲೆಗೆ ಪ್ರವೇಶಿಸುವುದಕ್ಕೆ ನಿಷೇಧ ವಿಧಿಸಿ ಮಾರ್ಚ್ 6 ರಂದು ಆದೇಶ ಮಾಡಿದ್ದರು. ಇದನ್ನು ಪ್ರಶ್ನಿಸಿ ತೊಗಾಡಿಯಾ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದ್ದ ಪೀಠವು ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.

ಈಗ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯವರು 2015ರಲ್ಲಿ ಆದೇಶ ಮಾಡಿದ್ದು, ಅದು ಮುಗಿದು ಹೋಗಿದೆ. ಹೀಗಾಗಿ, ಈ ಅರ್ಜಿಯನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಸಿದ್ದು ನಿಜ ಕನಸುಗಳ ಕೃತಿಯಲ್ಲೇನಿದೆ ನೋಡದೇ ತಡೆ ತಂದಿದ್ದು ಅಸಹಿಷ್ಣುತೆಗೆ ನಿದರ್ಶನ: ರೋಹಿತ್ ಚಕ್ರತೀರ್ಥ ವ್ಯಂಗ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.