ETV Bharat / state

ಶಿವಾಜಿನಗರ ಅಭ್ಯರ್ಥಿ ನಾಮಪತ್ರ ತಿರಸ್ಕೃತ.. ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ

author img

By

Published : Apr 27, 2023, 9:35 PM IST

ಚುನಾವಣಾ ಆಯೋಗದ ಕ್ರಮ ಪಶ್ನಿಸಿ ಅಬ್ದುಲ್ ಜಾಫರ್ ಅಲಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಶಿವಾಜಿನಗರದ ಜೆಡಿಎಸ್‌ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ನಾಮಪತ್ರ ತಿರಸ್ಕಾರ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಅಬ್ದುಲ್‌ ಜಾಫರ್ ಅಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ಕೊನೆಯ ಘಳಿಗೆಯಲ್ಲಿ ತಮ್ಮ ಹೆಸರನ್ನು ಮತ ಪಟ್ಟಿಯಲ್ಲಿ ಸೇರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಚುನಾವಣಾಧಿಕಾರಿಗಳು ಬಾಕಿ ಇಟ್ಟಿದ್ದಾರೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಏಪ್ರಿಲ್​ 20ರಂದು ಉಮೇದುವಾರಿಕೆ ಸಲ್ಲಿಸಿದ್ದ ಸಂದರ್ಭದಲ್ಲಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರಲಿಲ್ಲ. ಹಾಗಾಗಿ ಚುನಾವಣಾ ಆಯೋಗ ಕೈಗೊಂಡಿರುವ ಕ್ರಮ ನಿಯಮ ಬದ್ಧವಾಗಿದೆ. ಆದ್ದರಿಂದ ಈ ಹಂತದಲ್ಲಿ ಕೋರ್ಟ್‌ ಮಧ್ಯಪ್ರವೇಶ ಮಾಡಲಾಗದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಆರ್​ಟಿಐಯಡಿ ಕೇಳಿದ ಮಾಹಿತಿ ನಿರಾಕರಣೆ: ಮಹೇಶ್​ ಜೋಷಿಗೆ ದಂಡ ವಿಧಿಸಿದ ಹೈಕೋರ್ಟ್

ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲ ಶರತ್‌ ದೊಡ್ಡವಾಡ, ಅರ್ಜಿದಾರರು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏಪ್ರಿಲ್​ 20ರಂದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮನವಿ ಮಾಡಿದ್ದಾರೆ. ಆದರೆ ನಿಯಮದ ಪ್ರಕಾರ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ 7 ದಿನದ ನೋಟಿಸ್‌ ಅವಧಿ ಸೇರಿದಂತೆ 10 ದಿನಗಳ ಅವಶ್ಯಕತೆ ಇದೆ. ಅದರಂತೆ ಏಪ್ರಿಲ್​ 10ರವರೆಗೆ ಸಲ್ಲಿಕೆಯಾಗಿರುವ ಎಲ್ಲ ಮನವಿಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ: ಚೀನಾ ಮಹಿಳೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.. ಬೇಸಿಗೆಯಲ್ಲಿ ವಕೀಲರು ಕಪ್ಪು ಕೋಟ್ ಧರಿಸುವುದು ಕಡ್ಡಾಯವಲ್ಲ

ಅಲ್ಲದೆ ಅರ್ಜಿದಾರರು ಕೊನೆಯ ಕ್ಷಣದಲ್ಲಿ ಮನವಿ ನೀಡಿದ್ದರಿಂದ ಅವರ ಮನವಿಯನ್ನು ಹಾಗೆಯೇ ಇಡಲಾಗಿದೆ. ಆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇನ್ನು ನಾಮಪತ್ರ ಸಲ್ಲಿಕೆಯಾದಾಗ ಅರ್ಜಿದಾರರ ಹೆಸರು ಮತಪಟ್ಟಿಯಲ್ಲಿ ಇಲ್ಲದ ಕಾರಣ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ವಿವರಿಸಿ, ಕೊನೆಯ ಹಂತದಲ್ಲಿ ಕೋರ್ಟ್‌ ಇಂತಹ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬ ಸುಪ್ರೀಂಕೋರ್ಟ್‌ ತೀರ್ಪನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನೂ ಓದಿ : ಲಾಕ್​ಡೌನ್​ನಲ್ಲಿ​ ಟೆಂಡರ್ ಕರೆದು 5 ಕೋಟಿ ಮೊತ್ತದ ಕಾಮಗಾರಿಗೆ ಕಾರ್ಯಾದೇಶ ಆರೋಪ : ತನಿಖೆಗೆ ಹೈಕೋರ್ಟ್​ ಅನುಮತಿ

ಅರ್ಜಿದಾರರ ಪರ ವಕೀಲರು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನದಂದೇ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಮನವಿ ನೀಡಿದ್ದರೂ ಅದನ್ನು ಪರಿಗಣಿಸಿಲ್ಲ. ಇದರಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಹಾಗಾಗಿ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಮತ್ತು ಅದನ್ನು ಆಧರಿಸಿ ನಾಮಪತ್ರ ಅಂಗೀಕರಿಸುವಂತೆ ಆದೇಶ ನೀಡಬೇಕೆಂದು ನ್ಯಾಯಪೀಠವನ್ನು ಕೋರಿದರು.

ಇದನ್ನೂ ಓದಿ : 29 ಲಕ್ಷ ರೂ.ಗಳ ದುರುಪಯೋಗ, 28 ವರ್ಷ ಕಳೆದರೂ ಕ್ರಮಕ್ಕೆ ಮುಂದಾಗದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.