ಬೆಂಗಳೂರು: ನಗರದಲ್ಲಿ ತಲೆ ಎತ್ತಿರುವ ಅನಧಿಕೃತ ಕಟ್ಟಡಗಳ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಬಿಬಿಎಂಪಿ ಅಫಿಡವಿಟ್ ಸಲ್ಲಿಸಿದೆ. ಬಿಬಿಎಂಪಿಯು ಈಗಾಗಲೇ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ಪತ್ತೆ ಹಚ್ಚಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಅನಧಿಕೃತ ಕಟ್ಟಡ ಕೆಡವಲು ಸಮಯಾವಕಾಶ ನೀಡುವಂತೆ ಕೋರಿ, ನ್ಯಾಯಾಲಯಕ್ಕೆ ಬಿಬಿಎಂಪಿ ಪರ ವಕೀಲರು ಮನವಿ ಮಾಡಿದ್ದಾರೆ. ಮನವಿ ಪುರಸ್ಕರಿಸಿದ ಹೈಕೋರ್ಟ್ 2020ರ ಮಾರ್ಚ್ 21ರವೆರಗೂ ಸಮಯಾವಕಾಶ ನೀಡಿ ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಿದೆ.
ಇನ್ನು ನಗರದಲ್ಲಿ ತಲೆ ಎತ್ತಿರುವ ಅನಧಿಕೃತ ಕಟ್ಟಡಗಳು ಹಾಗೂ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಚಾಟಿ ಬೀಸಿತ್ತು.