ಬೆಂಗಳೂರು: ಆನ್‌ಲೈನ್ ಗೇಮಿಂಗ್‌ನ ಮಧ್ಯಸ್ಥ ಸಂಸ್ಥೆಯಾಗಿರುವ ಗೇಮ್ಸ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ಗೆ 21,000 ಕೋಟಿ ತೆರಿಗೆ ನೋಟಿಸ್ ನೀಡಿರುವುದಕ್ಕೆ ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿದ್ದರೂ, ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ದಳದ ಮಹಾನಿರ್ದೇಶಕರು (ಡಿಜಿಜಿಐ) ಶೋಕಾಸ್ ನೋಟಿಸ್ ಜಾರಿ ಮಾಡಿರುವ ಕ್ರಮ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದೆ.
ಸಂಸ್ಥೆಯ ಹಣಕಾಸು ಅಧಿಕಾರಿ ರಮೇಶ್ ಪ್ರಭು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು ತೀರ್ಪು ಕಾಯ್ದಿರಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೇಂದ್ರ ಸರ್ಕಾರದ ಕ್ರಮಕ್ಕೆ ನೋಟಿಸ್ಗೆ ತಡೆ ನೀಡಿದ್ದರೂ, ಮತ್ತೆ ನೋಟಿಸ್ ಜಾರಿ ಮಾಡಿದೆ. ಇದರಿಂದ ಹೈಕೋರ್ಟ್, ಸುಪ್ರೀಂಕೋರ್ಟ್ ಸೇರಿದಂತೆ ನ್ಯಾಯ ನಿರ್ಣಯ ಮಾಡುವ ಪ್ರಾಧಿಕಾರಗಳ ಮುಂದೆ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ವಾದ ಮಂಡಿಸಿದ್ದರು.
(ಓದಿ: ತುಮಕೂರು ನಗರ ಪಾಲಿಕೆ ಪೌರ ಕಾರ್ಮಿಕರ ಕಾಯಂಗೊಳಿಸಲು ಹೈಕೋರ್ಟ್ ಆದೇಶ)