ETV Bharat / state

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ಹೆಚ್ಚಿಸಿದ ಹೈಕೋರ್ಟ್

ಕಳೆದ ಆರು ವರ್ಷದ ಹಿಂದೆ ರಾಯಚೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಗೆ ಪರಿಹಾರವನ್ನು ಹೈಕೋರ್ಟ್​ ಹೆಚ್ಚಳ ಮಾಡಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Oct 16, 2023, 10:19 PM IST

ಬೆಂಗಳೂರು: ಕಳೆದ ಆರು ವರ್ಷಗಳ ಹಿಂದೆ ರಾಯಚೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ದ್ವಿಚಕ್ರ ವಾಹನ ಚಾಲಕನ ಕುಟುಂಬಕ್ಕೆ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ಆದೇಶಿಸಿದ್ದ 8.8 ಲಕ್ಷ ರೂ. ಪರಿಹಾರವನ್ನು ಹೈಕೋರ್ಟ್ 15.8 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶಿಸಿದೆ. ಅಪಘಾತದಲ್ಲಿ ಮೃತಪಟ್ಟಿದ್ದ 20 ವರ್ಷದ ಹುಲಿರಾಜ್ ಸಹೋದರರು ಮತ್ತು ತಾಯಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನವಾಜ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ನ್ಯಾಯಾಲಯ ರಾಯಚೂರಿನ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ 8.8 ಲಕ್ಷ ಪರಿಹಾರ ನಿಗದಿ ಮಾಡಿದ್ದನ್ನು ಪರಿಷ್ಕರಿಸಿ ಹೈಕೋರ್ಟ್, 15. 8 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿ ಅದನ್ನು ಸಂತ್ರಸ್ತರ ಕುಟುಂಬಕ್ಕೆ ಪಾವತಿಸುವಂತೆ ಪ್ರಕರಣದ ಪ್ರತಿವಾದಿಯಾಗಿರುವ ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪನಿಗೆ ಸೂಚನೆ ನೀಡಿದೆ.

ಅಲ್ಲದೆ ಪ್ರಕರಣದಲ್ಲಿ ಮಹೇಂದ್ರ ಬೊಲೇರೋ ಜೀಪ್ ಚಾಲಕನ ನಿರ್ಲಕ್ಷ್ಯ ದೃಢಪಟ್ಟಿದ್ದರೂ, ದ್ವಿಚಕ್ರ ವಾಹನ ಸವಾರನ ಬಳಿ ಲೈಸನ್ಸ್ ಇಲ್ಲದೇ ಇರುವ ಅಂಶವನ್ನೂ ಸಹ ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ, ಸ್ಥಳ ಪಂಚನಾಮೆ ಮತ್ತು ನಕ್ಷೆಯ ಪ್ರಕಾರ, ಜೀಪ್ ರಸ್ತೆಯ ಮಧ್ಯಭಾಗವನ್ನು ದಾಟಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಆದರೆ ಎಲ್ಲಾ ಅಂಶಗಳನ್ನು ನ್ಯಾಯಮಂಡಳಿ ಸರಿಯಾಗಿ ಪರಿಗಣಿಸಿಲ್ಲ ಎಂದು ಆದೇಶಿಸಿದೆ. ಅಲ್ಲದೆ, ನ್ಯಾಯಮಂಡಳಿ ಮೃತನ ಬಳಿ ವಾಹನ ಚಾಲನ ಪರವಾನಗಿ ಇಲ್ಲವೆಂದ ಮಾತ್ರಕ್ಕೆ ಆತನದ್ದೇ ಸಂಪೂರ್ಣ ನಿರ್ಲಕ್ಷ್ಯ ಎಂದು ಹೇಳಲಾಗದು ಎಂದು ನ್ಯಾಯಪೀಠ ತಿಳಿಸಿದೆ.

ಸುಪ್ರೀಂ ಕೋರ್ಟ್ ಸುಧೀರ್ ಕುಮಾರ್ ರಾಣಾ ವರ್ಸಸ್ ಸುರೀಂದರ್ ಸಿಂಗ್ ಪ್ರಕರಣದಲ್ಲಿ ಲೈಸನ್ಸ್ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧವಾದರೂ, ಅದೇ ಅಪಘಾತಕ್ಕೆ ನಿರ್ಲಕ್ಷ್ಯಕ್ಕೆ ಕಾರಣವೆಂದು ಹೇಳಲಾಗದು ಎಂದು ಹೇಳಿದೆ. ಅದನ್ನು ಈ ಪ್ರಕರಣದಲ್ಲಿ ಪರಿಗಣಿಸಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ: ಕುಡಿಯುವ ನೀರು ಮಾರಾಟ ಮಾಡುವ ಹುಲಿರಾಜ್ 2017 ರ ನ. 10ರಂದು ಬೈಕ್​ನಲ್ಲಿ ರಾಯಚೂರಿನ ಯರಮರಸ್‌ಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಹುಲಿರಾಜ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದನು. ಮೃತರ ಸಹೋದರ ಮತ್ತು ತಾಯಿ, ಮೃತನು ಮನೆಗೆ ಆಧಾರವಾಗಿ ದುಡಿಯುತ್ತಿದ್ದ, ಈಗ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಹಾಗಾಗಿ 54.5 ಪರಿಹಾರ ಕೋರಿ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ಮೊರೆ ಹೋಗಿದ್ದರು. ನ್ಯಾಯಮಂಡಳಿ, ಅಪಘಾತ ಜೀಪ್ ಚಾಲಕನ ನಿರ್ಲಕ್ಷ್ಯ ಹಾಗೂ ಅಡ್ಡಾದಿಡ್ಡಿ ಚಾಲನೆಯಿಂದ ಆಗಿದೆ. ಆದರೆ ಮೃತನು ವಾಹನ ಚಾಲನಾ ಪರವಾನಗಿ ಹೊಂದಿಲ್ಲ. ಹಾಗಾಗಿ ಆತನದ್ದೂ ನಿರ್ಲಕ್ಷ್ಯವಾಗುತ್ತದೆ ಎಂದು 8.8 ಲಕ್ಷ ರೂ. ಮಾತ್ರ ಪರಿಹಾರ ನಿಗದಿ ಮಾಡಿತ್ತು. ಅದನ್ನು ಪ್ರಶ್ನಿಸಿ ಮೃತರ ಕುಟುಂಬದವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ದಾಖಲೆಗಳು ಸಾಕ್ಷ್ಯಧಾರಗಳನ್ನು ಪರಿಶೀಲನೆ ನಡೆಸಿದ ನ್ಯಾಯಪೀಠ, ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಿದೆ.

ಇದನ್ನೂ ಓದಿ: 15 ವರ್ಷದ ಅಪ್ರಾಪ್ತನ ನೇಮಕಾತಿ ಹಿಂಪಡೆದಿದ್ದ ಸಾಹಿತ್ಯ ಅಕಾಡೆಮಿ ಕ್ರಮ ಎತ್ತಿಹಿಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.