ETV Bharat / state

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜಮೀರ್ ಅಹ್ಮದ್ ಸಲ್ಲಿಸಿದ್ದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿರುವ ಪ್ರಕರಣಕ್ಕೆ ತಡೆ ಕೋರಿ ಶಾಸಕ ಜಮೀರ್ ಅಹ್ಮದ್ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ, ಆದೇಶವನ್ನು ಕಾಯ್ದಿರಿಸಿದೆ.

High Court
ಹೈಕೋರ್ಟ್
author img

By

Published : Mar 31, 2023, 10:48 PM IST

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಪ್ರಕರಣಕ್ಕೆ ತಡೆ ಕೋರಿ ಶಾಸಕ ಜಮೀರ್ ಅಹ್ಮದ್ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಜಮೀರ್ ಅಹ್ಮದ್ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಆದೇಶವನ್ನು ಕಾಯ್ದಿರಿಸಿತು.

ಜಮೀರ್ ಪರ ವಾದ ಮಂಡಿಸಿದ ವಕೀಲರು: ವಿಚಾರಣೆ ವೇಳೆ ಜಮೀರ್ ಪರ ವಕೀಲರು ವಾದ ಮಂಡಿಸಿ, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸಬೇಕು ಎಂಬ ನಿಯಮ ಇಲ್ಲ. ಹಾಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದ್ದು, ತಡೆ ನೀಡಬಾರದು ಎಂದು ಅವರು ಕೋರಿದರು.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಯ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ

ತೀರ್ಪು ಕಾಯ್ದಿರಿಸಿದ ನ್ಯಾಯಪೀಠ: ವಾದ ಮುಂದುವರೆಸಿದ ಜಮೀರ ಪರ ವಕೀಲರು, ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದರು. ವಾದ ಹಾಗೂ ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ: ವಾಟ್ಸಾಪ್ ಮೂಲಕ ವಿಡಿಯೋ, ಸಂದೇಶ ರವಾನೆ: ಕೊಡಗಿನಲ್ಲಿ ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಪ್ರಕರಣದ ಹಿನ್ನೆಲೆ ಏನು?: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಿನಲ್ಲಿ ಎಫ್‌ಐಆರ್ ದಾಖಲಿಸಿತ್ತು. ಶಾಸಕರು ಆದಾಯ ಮೀರಿ 87 ಕೋಟಿ ರೂ. ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿತ್ತು. ಇದರಿಂದ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್ ಅಹ್ಮದ್, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದರು. ಜೊತೆಗೆ, ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.