ETV Bharat / state

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಓಲೇಕಾರ ಸಲ್ಲಿಸಿದ್ದ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್ - ETV Bharat kannada News

ಶಾಸಕ ನೆಹರೂ ಓಲೇಕಾರ್ ಸಲ್ಲಿಸಿದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠ ಆದೇಶ ಕಾಯ್ದಿರಿಸಿತು.

High Court
ಹೈಕೋರ್ಟ್
author img

By

Published : Mar 31, 2023, 11:05 PM IST

ಬೆಂಗಳೂರು: ಹಾವೇರಿ ನಗರಸಭೆ ಕಾಮಗಾರಿಗಳಿಗೆ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟು ಮಾಡಿದ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ದೋಷಿಯನ್ನಾಗಿ ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಶಾಸಕ ನೆಹರೂ ಓಲೇಕಾರ್ ಸಲ್ಲಿಸಿದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠ ಆದೇಶ ಕಾಯ್ದಿರಿಸಿತು.

ಈ ಪ್ರಕರಣದ ವಿಚಾರಣೆ ವೇಳೆ ಓಲೇಕಾರ್ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಒಳಸಂಚು ರೂಪಿಸಿಲ್ಲ. ಅಧೀನ ನ್ಯಾಯಾಲಯದ ಆದೇಶ ದೋಷಪೂರಿತ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ ಎಂಬ ಅಭಿಪ್ರಾಯಕ್ಕೆ ಹೈಕೋರ್ಟ್ ಬಂದಿದೆ. ಇದೇ ಕಾರಣಕ್ಕೆ ಅರ್ಜಿದಾರರಿಗೆ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ ಆದೇಶಕ್ಕೆ ತಡೆ ಸಹ ನೀಡಿದೆ. ಶಿಕ್ಷೆ ವಿಧಿಸಿದ ಆದೇಶವು ದೋಷಪೂರಿತವಾಗಿದೆ ಎಂದಾದರೆ ಅದರ ಪರಿಣಾಮಗಳನ್ನು ಆರೋಪಿ ಎದುರಿಸಬಾರದೆಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿದೆ. ಅದರಂತೆ ಪ್ರಕರಣದಲ್ಲಿ ಅರ್ಜಿದಾರ ಯಾವುದೇ ಪಾತ್ರ ಇಲ್ಲದ ಕಾರಣ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿದಾರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆಯೇ ಎಂದು ಪ್ರಶ್ನಿಸಿತು. ಓಲೇಕಾರ ಪರ ವಕೀಲರು ಇಲ್ಲ ಎಂದು ಉತ್ತರಿಸಿದಾಗ, ಏಕೆ ಇನ್ನೂ ಅನರ್ಹಗೊಳಿಸಿಲ್ಲ? ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ ಎಂದು ನ್ಯಾಯಪೀಠ ಮರು ಪ್ರಶ್ನೆ ಹಾಕಿತು.

ಇದೇ ವೇಳೆ ಓಲೇಕಾರ್ ಪರ ವಕೀಲರು, ಶಾಸಕರನ್ನು ಅನರ್ಹಗೊಳಿಸುವ ವಿಚಾರ ಸ್ಪೀಕರ್ ಅವರ ಅಧಿಕಾರ ವ್ಯಾಪ್ತಿಗೆ ಒಳಪಡುತ್ತದೆ. ಅವರು ವಿವೇಚನೆ ಬಳಸಿ ತೀರ್ಮಾನ ಕೈಗೊಳ್ಳತ್ತಾರೆ. ಆದರೆ, ದೋಷಿಯಾಗಿ ತೀರ್ಮಾನಿಸಿದ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವ ವಿಚಾರಕ್ಕೂ, ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ವಿಚಾರಕ್ಕೆ ಸಂಬಂಧ ಇಲ್ಲವಾಗಿದೆ ಎಂದು ಉತ್ತರಿಸಿದರು.

ಇದಕ್ಕೆ ಆಕ್ಷೇಪಿಸಿದ ಲೋಕಾಯುಕ್ತ ಪರ ವಕೀಲರು, ಕ್ರಿಮಿನಲ್ ಪ್ರಕರಣದಲ್ಲಿ ಚುನಾಯಿತ ಜನ ಪ್ರತಿನಿಧಿಗಳು ಎರಡು ವರ್ಷ ಕಾಲ ಶಿಕ್ಷೆಗೆ ಗುರಿಯಾದರೆ ಅವರ ಸ್ಥಾನ ತನ್ನಿಂದ ತಾನೇ ಅನರ್ಹತೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಸ್ಪಷ್ಟಪಡಿಸುತ್ತದೆ. ಪ್ರಕರಣದಲ್ಲಿ ಅರ್ಜಿದಾರರು ಕ್ರಿಮಿನಲ್ ಪಿತೂರಿ ನಡೆಸಿರುವ ಸಾಕ್ಷ್ಯಾಧಾರಗಳ ಸಮೇತ ವಿಶೇಷ ನ್ಯಾಯಾಲಯದಲ್ಲಿ ದೃಢಪಟ್ಟಿದೆ. ಆದ ಕಾರಣ ಅವರ ಮನವಿ ಪುರಸ್ಕರಿಸದೆ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ ಏನು? : ಪ್ರಕರಣ ಸಂಬಂಧ ನೆಹರು ಓಲೇಕಾರ್ ಅವರನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಅವರಿಗೆ ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ) 2023ರ ಫೆ.13ರಂದು ಆದೇಶ ಹೊರಡಿಸಿದೆ. ಈ ತೀರ್ಪು ಪ್ರಶ್ನಿಸಿ ಓಲೇಕರ್‌ಗೆ ಹೈಕೊರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಮಾ.3ರಂದು ಓಲೇಕಾರ್‌ಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯನ್ನು ಅಮಾನತಿನಲ್ಲಿರಿಸಿದ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಇದೀಗ ದೋಷಿಯಾಗಿ ತೀರ್ಮಾನಿಸಿರುವ ಆದೇಶದ ಭಾಗಕ್ಕೆ ತಡೆ ನೀಡಲು ಕೋರಿದ್ದಾರೆ.

ಇದನ್ನೂ ಓದಿ : ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.