ETV Bharat / state

ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಪ್ರಕರಣದ ವಿಚಾರಣೆ: ಅಧಿಕಾರಿ ವಿರುದ್ಧದ ಪ್ರಕರಣ ರದ್ದು ಮಾಡಿದ ಹೈಕೋರ್ಟ್ - ಮ್ಯಾಜಿಸ್ಟ್ರೇಟ್ ನ್ಯಾಯಾಲಯ

ಭ್ರಷ್ಟಾಚಾರ ಪ್ರಕರಣವಾದರೂ ಸರಿ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ತನಿಖಾ ಸಂಸ್ಥೆ ಸಲ್ಲಿಸುವ ಮನವಿಗೆ ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಅದನ್ನು ರದ್ದುಪಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.

highcourt
ಹೈಕೋರ್ಟ್`
author img

By

Published : Mar 27, 2023, 8:27 PM IST

ಬೆಂಗಳೂರು : ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಹಾಸನದ ಅರಕಲಗೂಡು ತಾಲೂಕು ಪಂಚಾಯಿತಿ ಮಾಜಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ವಿರುದ್ಧದ ಪ್ರಕರಣಗಳನ್ನು ವಿಚಾರಣೆಗೆ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಪಡಿಸಿರುವ ಹೈಕೋರ್ಟ್, ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ತನಿಖಾ ಸಂಸ್ಥೆ ಸಲ್ಲಿಸುವ ಮನವಿಗೆ ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಅದು ಭ್ರಷ್ಟಾಚಾರ ಪ್ರಕರಣವಾದರೂ ರದ್ದುಪಡಿಸಬೇಕಾಗುತ್ತದೆ ಎಂದು ತಿಳಿಸಿದೆ.

ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಕ್ರಮವನ್ನು ಪ್ರಶ್ನಿಸಿ ಅರಕಲಗೋಡಿನ ತಾಲೂಕು ಪಂಚಾಯತ್ನ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಫನೀಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿಂದ ನ್ಯಾಯಪೀಠ ಈ ಆದೇಶ ಮಾಡಿದೆ.

ಜೊತೆಗೆ, ಈ ರೀತಿಯ ಪ್ರಕರಣಗಳಲ್ಲಿ ಅನುಮತಿ ಕೋರಿ ತನಿಖಾಧಿಕಾರಿಗಳು ಸಲ್ಲಿಸುವ ಮನವಿಯನ್ನು ಆರು ತಿಂಗಳಲ್ಲಿ ಪರಿಗಣಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯಾಗಿದ್ದ ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಕಾಗ್ನಿಜಬಲ್ ಪಡೆದುಕೊಂಡಿದ್ದಾರೆ. ಅಧಿಕಾರಿಗಳ ವಿರುದ್ಧದ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಅನುಮತಿ ಕೇಳಿ ಸಲ್ಲಿಸುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಮತ್ತು ಸಕ್ಷಮ ಪ್ರಾಧಿಕಾರಗಳು ಅದನ್ನು ಮಂಜೂರು ಮಾಡುವುದಕ್ಕಾಗಿ ತಿಂಗಳುಗಳ ಕಾಲ ಕಡತಗಳ ಬಾಕಿ ಉಳಿಸಿಕೊಳ್ಳುವಂತಿಲ್ಲ.

ಅಲ್ಲದೆ, ಈ ರೀತಿಯ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗದಿರುವುದೂ ಒಂದು ನಿರ್ಧಾರವೇ ಆಗಿದೆ ಎಂದು ಪೀಠ ತಿಳಿಸಿದೆ. ಪ್ರಕರಣ ರದ್ದು ಪಡಿಸದಂತೆ ಸರ್ಕಾರ ತನ್ನ ವಕೀಲರ ಮೂಲಕ ನ್ಯಾಯಾಲಯದ ಮುಂದೆ ತೀವ್ರ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಅದಕ್ಕೆ ಬದಲಾಗಿ ಪ್ರಾಧಿಕಾರವು ಅಂತಹ ಮಂಜೂರಾತಿಗಾಗಿ ಸಲ್ಲಿಸುವ ಮನವಿಗಳನ್ನು ನಿರಾಕರಿಸುವ ಅಥವಾ ಅನುಮತಿಸುವುದೂ ಮುಖ್ಯವಾಗಲಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ?: ಅರಕಲಗೂಡು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಎಸ್. ಫನೀಶ್ ಅವರು ಪ್ರಸ್ತುತ ತಾವರದೇವರಕೊಪ್ಪಲುವಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2009-10 ರಲ್ಲಿ ಅರಕಲಗೋಡಿನ ತಾಲೂಕು ಪಂಚಾಯತ್​ನ ಕಾರ್ಯನಿವಾಹಣಾಧಿಕಾರಿಗಾಗಿದ್ದ ಸಂದರ್ಭದಲ್ಲಿ ಇಲಾಖೆಗಳಿಂದ ಅನುಮತಿ ಪಡೆಯದೆ ಅನುಷ್ಠಾನಗೊಳಿಸಲಾಗಿತ್ತು.

ಆ ಮೂಲಕ ಸರ್ಕಾರದ ಭೊಕ್ಕಸಕ್ಕೆ ದೊಡ್ಡ ಪ್ರಮಾಣದಲ್ಲಿ ನಷ್ಟವುಂಟಾಗಿತ್ತು ಎಂಬುದಾಗಿ ಅರ್ಜಿದಾರರ ವಿರುದ್ಧ 2010ರಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಐದು ವರ್ಷಗಳ ನಂತರ ತನಿಖಾಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.ಈ ನಡುವೆ ಅರ್ಜಿದಾರರ ವಿರುದ್ಧ ಇಲಾಖಾ ವಿಚಾರಣೆಯೂ ನಡೆದು ಆರೋಪಗಳು ಸಾಬೀತಾಗಿಲ್ಲ ಮತ್ತು ರಾಜ್ಯದ ಬೊಕ್ಕಸಕ್ಕೆ ಯಾವುದೇ ನಷ್ಟ ಉಂಟಾಗಿಲ್ಲ ಎಂದು ಅಧಿಕಾರಿಗಳು 2020ರಲ್ಲಿ ವರದಿ ನೀಡಿದ್ದರು. ಇದರ ಆಧಾರದಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋಟ್​ನಲ್ಲಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಲಂಚ ಆರೋಪ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.