ETV Bharat / state

ಕಾಫಿ ಪೌಡರ್​ನಲ್ಲಿ ಕಲಬೆರಕೆ ಮಾಡಿದ್ದ ಅಪರಾಧಿಗೆ ಶಿಕ್ಷೆ: ಕೆಳ ಕೋರ್ಟ್​ ಆದೇಶ ಎತ್ತಿಹಿಡಿದ ಹೈಕೋರ್ಟ್ - Production of coffee powder

ಕಾಫಿ ಪೌಡರ್‌ನಲ್ಲಿ ಕೆಫೇನ್ ಅಂಶ ಮತ್ತು ಜಲೀಯ ಸಾರ ಮಿಶ್ರಣ ಮಾಡಿ ಮಾರಾಟಕ್ಕೆ ಮುಂದಾಗಿದ್ದ ಸಕಲೇಶಪುರದ ಎಂ.ಎಸ್.ಕಾಫೀ ವರ್ಕ್ಸ್‌ನ ಮಾಲೀಕ ಸಯ್ಯದ್ ಅಹ್ಮದ್ ಎಂಬವರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

high court
ಹೈಕೋರ್ಟ್
author img

By

Published : Nov 11, 2022, 3:40 PM IST

ಬೆಂಗಳೂರು : ಕಾಫಿ ಪೌಡರ್‌ನಲ್ಲಿ ಕೆಫೇನ್ ಅಂಶ ಮತ್ತು ಜಲೀಯ ಸಾರ ಮಿಶ್ರಣ ಮಾಡಿ ಮಾರಾಟಕ್ಕೆ ಮುಂದಾಗಿದ್ದ ಸಕಲೇಶಪುರದ ಎಂ.ಎಸ್.ಕಾಫೀ ವರ್ಕ್ಸ್‌ನ ಮಾಲೀಕ ಸಯ್ಯದ್ ಅಹ್ಮದ್ ಎಂಬವರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ ಆರು ತಿಂಗಳು ಸಾಧಾರಣ ಶಿಕ್ಷೆ ಮತ್ತು ಒಂದು ಸಾವಿರ ರೂಪಾಯಿಗಳ ದಂಡ ವಿಧಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಯ್ಯದ್ ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ನವೆಂಬರ್ 8 ರಂದು ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಅಲ್ಲದೇ, ಆರೋಪಿತರು 45 ದಿನಗಳಲ್ಲಿ ಸಕಲೇಶಪುರದ ಜೆಎಂಎಫ್‌ಸಿ ನ್ಯಾಯಾಲಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ : ಸಕಲೇಶಪುರದ ಆಹಾರ ನಿರೀಕ್ಷಕರು 2008 ಜೂನ್ 20ರಂದು ಸಯ್ಯದ್ ಅಹ್ಮದ್ ಮಾಲೀಕತ್ವದ ಎಂ.ಎಸ್.ಕಾಫಿ ವರ್ಕ್ಸ್ ಗೆ ಭೇಟಿ ನೀಡಿ ಮಾರಾಟ ಮಾಡುತ್ತಿದ್ದ ಕಾಫಿ ಬೀಜಗಳು ಮತ್ತು ಅದರ ಪುಡಿಯನ್ನು ಪರಿಶೀಲನೆ ನಡೆಸಿದ್ದರು. ಅಲ್ಲದೆ, 600 ಗ್ರಾಂ ಕಾಫಿ ಪುಡಿಯನ್ನು ಖರೀದಿಸಿ ವೈಜ್ಞಾನಿಕ ಪರೀಕ್ಷೆಗೆ ರವಾನಿಸಿದ್ದರು.

ಈ ಪರೀಕ್ಷೆಯಲ್ಲಿ ಕಾಫಿ ಪುಡಿಯಲ್ಲಿ ಕಲಬೆರೆಕೆ ಮಾಡಿರುವುದು ಮತ್ತು ಮಿಸ್ ಬ್ರ್ಯಾಂಡ್ ಮಾಡಿರುವುದು ಬೆಳಕಿಗೆ ಬಂದಿತ್ತು. ಅಲ್ಲದೇ, ಶೇ 0.4 ಕೆಫೀನ್ ಮತ್ತು ಶೇ 55.0 ರಷ್ಟು ಜಲೀಯ ಸಾರ (ನೀರಿನ ಆವಿಯಾಗಿ ಉಳಿಯುವ ಘನ ಅಂಶ) ಅಂಶಗಳು ಇರುವುದು ಖಚಿತವಾಗಿತ್ತು.

ಜೊತೆಗೆ ಮಾರಾಟ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ಬ್ಯಾಚ್ ಸಂಖ್ಯೆ ನಮೂದಿಸಿರಲಿಲ್ಲ ಮತ್ತು ಎಷ್ಟು ದಿನಗಳವರೆಗೆ ಬಳಕೆಗೆ ಉತ್ತಮವಾಗಿರಲಿದೆ ಎಂಬುದನ್ನು ಮುದ್ರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಸಯ್ಯದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಸ್ಥಳವನ್ನು ಮಜರು ಮಾಡಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ಜಿಲ್ಲಾ ಆರೋಗ್ಯಾಧಿಕರಿಗಳಿಗೆ ಮನವಿ ಸಲ್ಲಿಸಿದ್ದರು.

ಸಯ್ಯದ್ ಈ ಆರೋಪವನ್ನು ನಿರಾಕರಿಸಿದ್ದರೂ, ಯಾವುದೇ ರೀತಿಯ ಸಾಕ್ಷ್ಯಾಧಾರಗಳನ್ನು ಒದಗಿಸಿರಲಿಲ್ಲ. ಹೀಗಾಗಿ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯಾಧಿಕಾರಿಗಳು ಅನುಮತಿ ನೀಡಿದ್ದರು. ಆಹಾರ ನಿರೀಕ್ಷಕರು ಪ್ರಕರಣ ಸಂಬಂಧ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ಸಕಲೇಶಪುರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿಗೆ ಶಿಕ್ಷೆಯನ್ನು ವಿಧಿಸಿತ್ತು. ಇದನ್ನು ಅರ್ಜಿದಾರ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ನ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿ ಶಿಕ್ಷೆ ವಿಧಿಸಿದ್ದ ಜೆಎಂಎಫ್‌ಸಿ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಯ್ಯದ್ ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಸಯ್ಯದ್ ಪರ ವಕೀಲರು ವಾದ ಮಂಡಿಸಿ, ಕಲಬೆರೆಕೆ ಮಾಡಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂಬುದಾಗಿ ತಿಳಿದು ಬಂದಿಲ್ಲ. ಅಂಗಡಿಯು ಚಿಲ್ಲರೆ ವ್ಯಾಪಾರ ಘಟಕವಾಗಿದ್ದು ಬ್ರ್ಯಾಂಡ್ ಉಲ್ಲಂಘನೆ ಅಂಶವೂ ಅನ್ವಯವಾಗುವುದಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಕಲಬೆರಕೆ ಅಂಶ ಆರೋಗ್ಯಕ್ಕೆ ಹಾನಿಕಾರಕವಾಗಿರಬೇಕು ಎಂದಿಲ್ಲ. ಆದರೆ, ಮಾರಾಟ ಮಾಡುವ ವಸ್ತುವಿನ ತಯಾರಿಕೆ ಬ್ಯಾಚ್ ಸಂಖ್ಯೆ ಮತ್ತು ಎಷ್ಟು ದಿನಗಳವರೆಗೂ ಬಳಕೆಗೆ ಉತ್ತಮವಾಗಿರಲಿದೆ ಎಂಬ ಅಂಶ ಉಲ್ಲೇಖಿಸದಿರುವುದು ಕಾನೂನು ಅಪರಾಧ ಎಂದು ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಪೀಠ, ಅಪರಾಧಿಗೆ ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ : ಅವಧಿಗೂ ಮುನ್ನ ನೌಕರನ ನಿವೃತ್ತಿಗೆ ಸೂಚಿಸಿದ್ದ ಕೆಎಸ್​​ಸಿಎಗೆ ಹೈಕೋರ್ಟ್ ನೋಟಿಸ್​

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.