ETV Bharat / state

ಜುಲೈ 16ರಿಂದ ಬೋಧಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ

ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿ ಜುಲೈ 16ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

csdd
ಬೋಧಕ ಸಿಬ್ಬಂದಿ ಜುಲೈ 16 ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ
author img

By

Published : Jul 2, 2020, 9:30 PM IST

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿ ಜುಲೈ 16ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

dsdd
ಬೋಧಕ ಸಿಬ್ಬಂದಿ ಜುಲೈ 16ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ

ಕೊರೊನಾ ಲಾಕ್​ಡೌನ್​ನಿಂದ ಸ್ತಬ್ಧಗೊಂಡಿದ್ದ ಉನ್ನತ ಶಿಕ್ಷಣ ಶೈಕ್ಷಣಿಕ ವ್ಯವಸ್ಥೆ ಜುಲೈ ತಿಂಗಳ ಮೂರನೇ ವಾರದಿಂದ ಆರಂಭಗೊಳ್ಳುವ ಸೂಚನೆ ನೀಡಿದೆ. ಜೂನ್ 5ರಿಂದ ಜೂನ್ 30ರವರೆಗೆ ಅನ್ವಯವಾಗುವಂತೆ ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗೆ ರಜೆ ಘೋಷಿಸಲಾಗಿತ್ತು. ಈಗ ಜುಲೈ 15ರವರೆಗೆ ರಜೆ ಅಧಿಕೃತವಾಗಿ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ್​ ಆದೇಶ ಹೊರಡಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಈ ಸುತ್ತೋಲೆ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳುವ ಸುಳಿವು ನೀಡಿದೆ. ಆದರೆ ಸದ್ಯದ ಮಟ್ಟಿಗೆ ಇದು ಬೋಧಕ ವರ್ಗಕ್ಕೆ ಸೀಮಿತವಾಗಿದ್ದು, ವಿದ್ಯಾರ್ಥಿಗಳ ಸಂಬಂಧ ಯಾವುದೇ ಅಧಿಕೃತ ಆದೇಶ, ಸುತ್ತೋಲೆ ಹೊರಡಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.