ETV Bharat / state

ಡಿಕೆಶಿ ವಿರುದ್ಧದ ತನಿಖೆ ವಿಳಂಬವಾಗಿಲ್ಲ, 596 ದಾಖಲೆ ಸಂಗ್ರಹ, 84 ಸಾಕ್ಷ್ಯಗಳ ವಿಚಾರಣೆ : ಹೈಕೋರ್ಟ್‌ಗೆ ಸಿಬಿಐ ಮಾಹಿತಿ

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಬಿಐ ಡಿಕೆ ಶಿವಕುಮಾರ್​ ವಿರುದ್ಧ 596 ದಾಖಲೆ ಸಂಗ್ರಹ, 84 ಸಾಕ್ಷ್ಯಗಳ ವಿಚಾರಣೆ ನಡೆಸಿರುವ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

CBI information to High Court  investigation against DK Shivakumar  DK Shivakumar assets case  ಡಿಕೆಶಿ ವಿರುದ್ಧದ ತನಿಖೆ ವಿಳಂಬವಾಗಿಲ್ಲ  596 ದಾಖಲೆ ಸಂಗ್ರಹ  ಹೈಕೋರ್ಟ್‌ಗೆ ಸಿಬಿಐ ಮಾಹಿತಿ  ಸಿಬಿಐ ಡಿಕೆ ಶಿವಕುಮಾರ್​ ವಿರುದ್ಧ 596 ದಾಖಲೆ ಸಂಗ್ರಹ  84 ಸಾಕ್ಷ್ಯಗಳ ವಿಚಾರಣೆ ಬಗ್ಗೆ ಹೈಕೋರ್ಟ್​ಗೆ ಮಾಹಿತಿ  ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಶಿವಕುಮಾರ್ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣ  ತನಿಖೆಯಲ್ಲಿ ಯಾವುದೇ ರೀತಿಯಲ್ಲೂ ವಿಳಂಬ  ಅರ್ಜಿದಾರರ ವಿರುದ್ಧದ ಆರೋಪ
ಡಿಕೆಶಿ ವಿರುದ್ಧದ ತನಿಖೆ ವಿಳಂಬವಾಗಿಲ್ಲ
author img

By

Published : Jul 13, 2023, 10:51 PM IST

ಬೆಂಗಳೂರು : ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ದದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಸ್ವತಂತ್ರವಾಗಿ 596 ದಾಖಲೆಗಳನ್ನು ಸಂಗ್ರಹಿಸಲಾಗಿದ್ದು, 84 ಸಾಕ್ಷಿಗಳನ್ನು ಪರಿಶೀಲಿಸಿದೆ. ತನಿಖೆಯಲ್ಲಿ ಯಾವುದೇ ರೀತಿಯಲ್ಲೂ ವಿಳಂಬವಾಗಿಲ್ಲ ಎಂದು ಹೈಕೋರ್ಟ್‌ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತಿಳಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧದ ಸಿಬಿಐ ದಾಖಲಿಸಿರುವ ಎಫ್‌ಐಆರ್ ವಜಾ ಮಾಡುವಂತೆ ಕೋರಿ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ನ್ಯಾಯಪೀಠಕ್ಕೆ ಸಿಬಿಐ ಪರ ವಕೀಲರು ವಿವರಿಸಿದರು.
ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಪಿ ಪ್ರಸನ್ನಕುಮಾರ್, ಸಿಬಿಐ ತನಿಖೆಯ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು.

ಅರ್ಜಿದಾರರ ವಿರುದ್ಧದ ಆರೋಪ ಸಂಬಂಧ ಸಿಬಿಐ ಸ್ವತಂತ್ರವಾಗಿ 596 ದಾಖಲೆಗಳನ್ನು ಸಂಗ್ರಹಿಸಿದೆ. 84 ಸಾಕ್ಷಿಗಳನ್ನು ಪರಿಶೀಲಿಸಲಾಗಿದೆ. ಇಲ್ಲಿ ಯಾವುದೇ ರೀತಿಯಲ್ಲೂ ತನಿಖೆ ವಿಳಂಬವಾಗಿಲ್ಲ. 2020ರ ಅಕ್ಟೋಬರ್ 3ಕ್ಕೆ ಎಫ್‌ಐಆರ್ ದಾಖಲಾಗಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ಸಾಧ್ಯವಿಲ್ಲ ಎಂದು ತಿಳಿದು ಶಿವಕುಮಾರ್ ಅವರು ಎಫ್‌ಐಆರ್ ವಜಾ ಕೋರಿ 2022ರ ಜುಲೈ 28ರಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ವಿವರಿಸಿದರು.

ಕಾನೂನಿನ ಅನ್ವಯ ತನಿಖೆ ನಡೆದಿಲ್ಲ ಎಂಬ ಅರ್ಜಿದಾರರ ವಾದ ಸತ್ಯಕ್ಕೆ ದೂರವಾಗಿದೆ. ಪೊಲೀಸ್ ವರಿಷ್ಠಾಧಿಕಾರಿಯು ಪ್ರಕರಣದ ತನಿಖೆ ನಡೆಸಲು ಅನುಮತಿಸಬೇಕು. ಅದೇ ರೀತಿ ಸಿಬಿಐ ಪೊಲೀಸ್ ವರಿಷ್ಠಾಧಿಕಾರಿಯು ಡಿವೈಎಸ್ಪಿ ಅವರಿಗೆ ತನಿಖೆ ನಡೆಸಲು ಅನುಮತಿಸಿದ್ದಾರೆ. ಆದ್ದರಿಂದ, ಇಲ್ಲಿ ಯಾವುದೇ ಅಕ್ರಮವಾಗಿಲ್ಲಎಂದು ಮಾಹಿತಿ ನೀಡಿದರು.

ಅರ್ಜಿದಾರರ ಪ್ರಮಾಣ ಪತ್ರ ಮತ್ತು ಎಫ್‌ಐಆರ್​ನಲ್ಲಿನ ಆಸ್ತಿ ಮೌಲ್ಯದಲ್ಲಿ ವ್ಯತ್ಯಾಸವಿದೆ ಎಂದು ಆಕ್ಷೇಪಿಸಲಾಗಿದೆ. ಆದರೆ, ಸಿಬಿಐ ಇಲ್ಲಿ ಬೆಂಗಳೂರಿನ ರಾಜಾಜಿನಗರದಲ್ಲಿನ ಲುಲ್ಲು ಮಾಲ್‌ನಲ್ಲಿ ಶಿವಕುಮಾರ್ ಅವರ ಶೇ. 21ರಷ್ಟು ಷೇರು ಮಾತ್ರ ಅಂದರೆ 7.8 ಕೋಟಿ ರೂಪಾಯಿಯನ್ನು ಪರಿಗಣಿಸಲಾಗಿದೆ. ಇಲ್ಲಿ ಭೂಮಿಯ ಮೌಲ್ಯವನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಉಳಿದ ವಿಚಾರದ ಕುರಿತು ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು.

ಅರ್ಜಿದಾರರ ಪತ್ನಿಯ ಬಳಿ 17.33 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇತ್ತು. ಈಗ ಅದು 42.05 ಕೋಟಿ ರೂಪಾಯಿ ಮೌಲ್ಯ ಹೊಂದಿದ್ದು, ಅದನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಶಿವಕುಮಾರ್ ಅವರ ಮಕ್ಕಳ ಬಳಿ 61.75 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಇತ್ತು. ಈಗ ಅದು 75 ಕೋಟಿ ರೂಪಾಯಿ ಮೌಲ್ಯ ಹೊಂದಿದೆ. ಇದನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.

ಅರ್ಜಿದಾರರು ಎಫ್‌ಐಆರ್ ದಾಖಲಿಸುವುದಕ್ಕೂ ಮುನ್ನ ವಿವರಣೆ ನೀಡಲು ಅವಕಾಶ ಕಲ್ಪಿಸಲಾಗಿಲ್ಲ ಎಂದು ವಾದಿಸಿದ್ದಾರೆ. ಎಫ್‌ಐಆರ್ ದಾಖಲಿಸುವುದಕ್ಕೂ ಮುನ್ನ ವಿವರಣೆ ನೀಡಲು ಅವಕಾಶ ನೀಡಲಾಗದು. ಆದರೆ, ಎಫ್‌ಐಆರ್ ದಾಖಲಿಸಿದ ಬಳಿಕ ಡಿಕೆ ಶಿವಕುಮಾರ್ ಅವರಿಗೆ ವಿವರಣೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಗ ಅವರು ಒಂದಷ್ಟು ದಾಖಲೆ ನೀಡಿದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ ಎಂದು ಪೀಠಕ್ಕೆ ಅವರು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.

ಓದಿ: ನಾಗವಾರ ಭೂ ಸ್ವಾದೀನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತೇವೆ: ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.