ETV Bharat / state

ಜುಲೈ 1ರ ವೇಳೆಗೆ ಐಫೋನ್ ತಯಾರಿಕಾ ಕಂಪನಿ ಫಾಕ್ಸ್​ಕಾನ್​ಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್ - ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನ ದೇವನಹಳ್ಳಿ ಸ್ಥಾಪಿಸಲಿರುವ ಐಫೋನ್ ಅಸೆಂಬ್ಲಿ ಘಟಕಕ್ಕಾಗಿ ಫಾಕ್ಸ್​ಕಾನ್​ ಕಂಪನಿಗೆ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರ ಮಾಡುವುದಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

The land will be handed over to Foxconn soon says Minister MB Patil
ಶೀಘ್ರವೇ ಐಫೋನ್ ತಯಾರಿಕಾ ಕಂಪನಿ ಫಾಕ್ಸ್​ಕಾನ್​ಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್
author img

By

Published : Jun 1, 2023, 7:46 PM IST

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್​ಕಾನ್​ಗೆ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. 2024ರ ಏಪ್ರಿಲ್ 1ರ ವೇಳೆಗೆ ಬೆಂಗಳೂರಿನ ದೇವನಹಳ್ಳಿ ಸ್ಥಾಪಿಸಲಿರುವ ಐಫೋನ್ ಅಸೆಂಬ್ಲಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಭೂಮಿ ಹಸ್ತಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.

  • ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ #ಫಾಕ್ಸ್_ಕಾನ್ ಸಂಸ್ಥೆಯ ಆಡಳಿತ ಮಂಡಳಿಯ ಉನ್ನತ ಅಧಿಕಾರಿಗಳು, ಬೆಂಗಳೂರಿನ ದೇವನಹಳ್ಳಿ ಬಳಿ ಸ್ಥಾಪಿಸಲಿರುವ #ಐಫೋನ್ ಅಸೆಂಬ್ಲಿ ಘಟಕದ ಕುರಿತು ಈ ದಿನ ನನ್ನನ್ನು ಭೇಟಿಮಾಡಿ ಚರ್ಚಿಸಿದರು. ಸಭೆಯಲ್ಲಿ ಐ.ಟಿ. & ಬಿ.ಟಿ. ಸಚಿವರಾದ ಶ್ರೀ @PriyankKharge ಹಾಗೂ ಇಲಾಖೆಯ ಅಧಿಕಾರಿಗಳು… pic.twitter.com/eNaarzURZB

    — M B Patil (@MBPatil) June 1, 2023 " class="align-text-top noRightClick twitterSection" data=" ">

ಜಾರ್ಜ್ ಚು ಅವರ ನೇತೃತ್ವದಲ್ಲಿ ಫಾಕ್ಸ್​ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ತಂಡವು ಸೌಜನ್ಯದ ಭೇಟಿ ನೀಡಿದ್ದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ. ಈ ವೇಳೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಐಟಿಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ‌ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ: ಹೈದರಾಬಾದ್​ನಲ್ಲಿ ಫಾಕ್ಸ್​ಕಾನ್ ಘಟಕ ನಿರ್ಮಾಣಕ್ಕೆ ಚಾಲನೆ: 25 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ

ಇದರೊಂದಿಗೆ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿಯ ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಿದಂತಾಗಿದೆ. ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲು ಸಚಿವರು ಮುಂದಾಗಿದ್ದಾರೆ.

ದಿನಕ್ಕೆ 50 ಲಕ್ಷ ಲೀಟರ್ ನೀರು ಬೇಕಾಗುವುದಾಗಿ ಕಂಪನಿ ತಿಳಿಸಿದೆ.‌ ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ಲಭ್ಯವಾಗಿಸಲು ಒತ್ತು ಕೊಡುವುದಾಗಿಯೂ ತಿಳಿಸಿದರು.

ತೈವಾನ್ ಮೂಲದ ಮುಂಚೂಣಿ ಕಂಪನಿ ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡಾ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕೆಐಎ‌‌ಡಿಬಿಗೆ ಪಾವತಿಸಿದೆ.

ಮತ್ತೊಂದೆಡೆ, ಜುಬಿಲಿಯಂಟ್ ಫುಡ್ ವಕ್ಸ್​ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್ ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್ ವೆಂಕಟೇಶನ್ ಮತ್ತಿತರರು ಸಹ ಸಚಿವ ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ದೇಶದ ಉತ್ಪಾದನಾ ವಲಯದ ಬೆಳವಣಿಗೆಯಲ್ಲಿ ಭಾರಿ ಹೆಚ್ಚಳ: 31 ತಿಂಗಳಲ್ಲೇ ಗರಿಷ್ಠ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.