ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಈ ಪಟ್ಟಿ ಬಿಡುಗಡೆಯಾಗಿದ್ದು, ಬಿ.ಕೆ. ಹರಿಪ್ರಸಾದ್ ಹಾಗೂ ನಜೀರ್ ಅಹಮದ್ ಅಭ್ಯರ್ಥಿಗಳೆಂದು ಘೋಷಿಸಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಪಕ್ಷದ ಹೈಕಮಾಂಡ್ ಮಣೆ ಹಾಕುವ ಮೂಲಕ ದೊಡ್ಡ ಅಚ್ಚರಿ ಮೂಡಿಸಿದೆ. ವಿಧಾನಪರಿಷತ್ನಿಂದ ನಿವೃತ್ತಿಯಾಗಿದ್ದ ನಜೀರ್ ಅಹಮದ್ ಅವರು ಮರು ಆಯ್ಕೆಯ ಅವಕಾಶ ಪಡೆದಿದ್ದಾರೆ.
ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ಪಡೆದು ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಪ್ರಕಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ವೋಟ್ ಬ್ಯಾಂಕ್ ಆಗಿರುವ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಕೈ ಬಿಡದಿರಲು ನಿರ್ಧರಿಸಿ, ಈ ತೀರ್ಮಾನ ಕೈಗೊಂಡಿದೆ. ಇನ್ನೊಂದೆಡೆ ಪಕ್ಷದ ಹಿರಿಯರು ಹಾಗೂ ನಿಷ್ಠಾವಂತರಾಗಿರುವ ಬಿ.ಕೆ. ಹರಿಪ್ರಸಾದ್ ಅವರಿಗೂ ಕೂಡ ಮಣೆ ಹಾಕಿದೆ.