ಬೆಂಗಳೂರು: ಮುಂಜಾನೆ ವಾಕಿಂಗ್ಗೆ ಎಂದು ಪಾರ್ಕ್ಗೆ ಬಂದಿರುವ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಆರ್.ಟಿ ನಗರದಲ್ಲಿ ನಡೆದಿದೆ.
ಪಾರ್ಕ್ನಲ್ಲಿ ವಾಕಿಂಗ್ ಬಂದಾಗ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು ಆ್ಯಂಬುಲೆನ್ಸ್ ಹಾಗೂ ಪೊಲೀಸರಿಗೆ ಕರೆ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಗೆ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು, ಮೃತನ ಕುಟುಂಬಸ್ಥರ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ.
ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾಕಷ್ಟು ಕೇಸ್ಗಳಲ್ಲಿ ಕೊರೊನಾ ಇರುವ ವಿಚಾರ ಗೊತ್ತಾಗುವುದೇ ಇಲ್ಲ. ಮೃತಪಟ್ಟ ನಂತರ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ದೃಢವಾಗುತ್ತಿದೆ. ಸದ್ಯ ಮರಣೋತ್ತರ ಪರೀಕ್ಷೆಯ ನಂತರ ಯಾವ ರೀತಿ ಈ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂಬ ವಿಚಾರ ತಿಳಿದು ಬರಲಿದೆ.