ETV Bharat / state

ಮುಂದಿನ ಐದು ದಿನ ರಾಜ್ಯಾದ್ಯಂತ ವ್ಯಾಪಕ ಮಳೆ: ಎಲ್ಲೆಡೆ ಹೈ ಅಲರ್ಟ್​ - karnataka weather report latest news

ರಾಜ್ಯಾದ್ಯಂತ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗಲಿದೆ. ವರುಣನ ಆರ್ಭಟದ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

RAIN
ವ್ಯಾಪಕ ಮಳೆ
author img

By

Published : Jul 19, 2021, 7:03 PM IST

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಜುಲೈ 23ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದರು.

ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 20ರಂದು ಯೆಲ್ಲೋ ಅಲರ್ಟ್, ಜುಲೈ 21, 22 ಹಾಗೂ 23 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿ ಹೆಚ್ಚು ಮಳೆ ನಿರೀಕ್ಷಿಸಲಾಗಿದೆ. ಜುಲೈ 20, 21 ಹಾಗೂ 22ರಂದು ಯೆಲ್ಲೋ ಅಲರ್ಟ್, ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದರು.

ಹಲವೆಡೆ ವ್ಯಾಪಕ ಮಳೆ: ನೈರುತ್ಯ ಮುಂಗಾರು ಸೋಮವಾರ ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಿತ್ತು. ಉತ್ತರ ಒಳನಾಡಿನಲ್ಲಿ ಸಕ್ರೀಯ ಹಾಗೂ ಕರಾವಳಿಯಲ್ಲಿ ಸಾಮಾನ್ಯವಾಗಿದ್ದು, ಹಲವೆಡೆ ವ್ಯಾಪಕ ಮಳೆಯಾಗಿದೆ.

ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 10 ಸೆಂ.ಮೀ, ಉತ್ತರ ಕನ್ನಡದ ಭಟ್ಕಳ, ಕಲಬುರಗಿಯ ಗುಂಡಗುರ್ತಿಯಲ್ಲಿ ತಲಾ 9 ಸೆಂ.ಮೀ, ಶಿವಮೊಗ್ಗದ ಹುಂಚದಕಟ್ಟೆ, ಅಗ್ರಹಾರ, ಕೋಣಂದೂರು, ಅರಸಾಳು, ಉಡುಪಿಯ ಕೊಲ್ಲೂರಿನಲ್ಲಿ ತಲಾ 8 ಸೆಂ.ಮೀ, ಶಿರಾಲಿ, ಕೋಟದಲ್ಲಿ ತಲಾ 7 ಸೆಂ.ಮೀ, ಉತ್ತರ ಕನ್ನಡದ ಮಂಕಿ, ಹೊನ್ನಾವರ, ಯಾದಗಿರಿಯ ಭೀಮರಾಯನಗುಡಿ, ಕವಡಿಮಟ್ಟಿ, ಕಲಬುರಗಿಯ ಸೇಡಂ, ತೀರ್ಥಹಳ್ಳಿ, ಭಾಗಮಂಡಲ, ದಾವಣಗೆರೆಯ ಹರಪನಹಳ್ಳಿಯಲ್ಲಿ ತಲಾ 6 ಸೆಂ.ಮೀ. ಎಂದು ವಿವರಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಬೆಳಗಿನಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಓದಿ: SSLC EXAM: ಸಚಿವ ಸುರೇಶ್​ಕುಮಾರ್​ಗೆ ಥ್ಯಾಂಕ್ಸ್ ಹೇಳಿದ ವಿದ್ಯಾರ್ಥಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.