ETV Bharat / state

ರಾಜ್ಯದಲ್ಲಿಂದು 25,000 ಜನರಿಗೆ ಕೊರೊನಾ ದೃಢ: 1ಲಕ್ಷ ದಾಟಿತು ಸಕ್ರಿಯ ಪ್ರಕರಣಗಳ ಸಂಖ್ಯೆ!

Karnataka COVID case update: ರಾಜ್ಯದಲ್ಲಿ ಇಂದು 25,005 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ. ಇಂದು 2,363 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 29,70,365 ಜನ ಡಿಸ್ಚಾರ್ಜ್ ಆಗಿದ್ದಾರೆ.

Corona cases in Karnataka today
ಕೋವಿಡ್
author img

By

Published : Jan 13, 2022, 6:51 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಗುರುವಾರ 2,01,704 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 25,005 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ‌.

ಈ ಮೂಲಕ ಸೋಂಕಿತರ ಸಂಖ್ಯೆ 31, 24,524ಕ್ಕೆ ಏರಿಕೆ ಆಗಿದೆ. ಇತ್ತ 8 ಮಂದಿ ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 38,397 ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ರೇಟ್​​ ಶೇ.12.39 ರಷ್ಟಿದ್ದು, 2,363 ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 29,70, 365 ಜನ ಡಿಸ್ಚಾರ್ಜ್ ಆಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ.. ಅಂದಿನಿಂದ ಇಂದಿನವರೆಗೆ ಏನೆಲ್ಲಾ ಬೆಳವಣಿಗೆ..!

ಬೆಂಗಳೂರಿನಲ್ಲಿಯೂ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, 18,374 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 91 ಸಾವಿರದಷ್ಟು ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.