ಬೆಂಗಳೂರು: ಇಂದು ಒಂದೇ ದಿನ ಕೊರೊನಾ ಸೋಂಕು 10 ಜನರಲ್ಲಿ ದೃಢಪಟ್ಟಿದೆ. ಈವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ರ ಗಡಿದಾಟಿದೆ. ಇದುವರೆಗೂ 3 ಮರಣ ಮತ್ತು 6 ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ..
ಸೋಂಕಿತರ ಹಿಸ್ಟರಿ ಹೀಗಿದೆ...
*ರೋಗಿ-89*: 52 ವರ್ಷದ ವ್ಯಕ್ತಿಯು ಹೊಸಪೇಟೆ-ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಮಾರ್ಚ್ 16 ರಂದು ಬೆಂಗಳೂರಿಗೆ ಪ್ರಯಾಣಿಸಿದ ಹಿನ್ನೆಲೆ ಇರುತ್ತದೆ. ಇವರನ್ನು ಬಳ್ಳಾರಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ-90*: 48 ವರ್ಷದ ಮಹಿಳೆ, ಹೊಸಪೇಟೆ-ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಇವರು ಮಾರ್ಚ್ 16 ರಂದು ಬೆಂಗಳೂರು ಪ್ರಯಾಣಿಸಿದ ಪ್ರಯಾಣ ಹಿನ್ನಲೆ ಇರುತ್ತದೆ. ಇವರನ್ನು ಬಳ್ಳಾರಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ-91*: 26 ವರ್ಷದ ಮಹಿಳೆ, ಹೊಸಪೇಟೆ-ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಮಾರ್ಚ್ 16ರಂದು ಬೆಂಗಳೂರು ಜಿಲ್ಲೆಗೆ ಪ್ರಯಾಣಿಸಿದ್ದು, ಬಳ್ಳಾರಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ-92*: 40 ವರ್ಷದ ಪುರುಷ, ಬೆಂಗಳೂರು ಜಿಲ್ಲೆಯ ನಿವಾಸಿಯಾಗಿದ್ದು (P59 ಸಂಪರ್ಕಿತ), ಇವರನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ93* : 19 ವರ್ಷದ ಯುವಕ ಬೆಂಗಳೂರು ಜಿಲ್ಲೆಯ ನಿವಾಸಿಯಾಗಿದ್ದು, ನ್ಯೂಯಾರ್ಕ್, ಯು.ಎಸ್.ಎ ನಿಂದ ಮಾರ್ಚ್ 22 ರಂದು ಭಾರತಕ್ಕೆ ವಾಪಸಾಗಿರುವ ಪ್ರಯಾಣ ಹಿನ್ನಲೆ ಇರುತ್ತದೆ. ಇವರನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ94*: 40 ವರ್ಷದ ಮಹಿಳೆ, ಗೌರಿಬಿದನೂರು-ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಯಾಗಿರುತ್ತಾರೆ. ಇವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ95*: 35 ವರ್ಷದ ಪುರುಷ, ಮೈಸೂರು ಜಿಲ್ಲೆಯ ನಿವಾಸಿಯಾಗಿರುತ್ತಾರೆ (P52 ಸಂಪರ್ಕಿತ), ಇವರನ್ನು ಮೈಸೂರು ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ96*: 41 ವರ್ಷದ ಪುರುಷ, ಮೈಸೂರು ಜಿಲ್ಲೆಯ ನಿವಾಸಿಯಾಗಿರುತ್ತಾರೆ (P52 ಸಂಪರ್ಕಿತ). ಇವರನ್ನು ಮೈಸೂರು ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ-97*: 34 ವರ್ಷದ ಪುರುಷ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳಸಿ ಮಾರ್ಚ್ 18 ರಂದು ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನಲೆ ಇರುತ್ತದೆ. ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.
*ರೋಗಿ-98*: 26 ವರ್ಷದ ಪುರುಷ, ಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿ ಮಾರ್ಚ್ 20 ರಂದು ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನಲೆ ಇರುತ್ತದೆ. ಇವರನ್ನು ಉತ್ತರ ಕನ್ನಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿರುತ್ತದೆ.