ETV Bharat / state

ಕಾವೇರಿ ಬಿಕ್ಕಟ್ಟು: ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದೊಂದೇ ಮಾರ್ಗ - ಮಾಜಿ ಸಿಎಂ ಯಡಿಯೂರಪ್ಪ - ಕಾವೇರಿ ನದಿ ನೀರಿನ ವಿಷಯ

ರಾಜ್ಯದ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್​ಗೆ ಮನವರಿಕೆ ಮಾಡಿಕೊಡುವ ಪ್ರಯತ್ನವಾಗಬೇಕಿದೆ ಎಂದು ಬಿ ಎಸ್​ ಯಡಿಯೂರಪ್ಪ ಹೇಳಿದ್ದಾರೆ.

Former CM B S Yediyurappa
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
author img

By ETV Bharat Karnataka Team

Published : Sep 23, 2023, 12:11 PM IST

Updated : Sep 23, 2023, 4:07 PM IST

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ

ಬೆಂಗಳೂರು: ಕಾವೇರಿ ನದಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರದ ತಜ್ಞರ ತಂಡವನ್ನು ಕಳುಹಿಸಿಕೊಡಲಿ, ಜಲಾಶಯದ ನೀರಿನ ಮಟ್ಟವನ್ನು ನೋಡಲಿ. ಬೆಂಗಳೂರಿಗೆ ಕುಡಿಯುವ ನೀರು ಕೊಡದೆ ಇರುವ ಪರಿಸ್ಥಿತಿ ಇದೆ. ನಾವು ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲ. ಇದರ ಬಗ್ಗೆ ಸುಪ್ರೀಂ ಕೋರ್ಟ್​​ಗೆ ಮನವರಿಕೆ ಮಾಡಿಕೊಡುವ ಎಲ್ಲಾ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಎಸ್​ವೈ, ಈಗಾಗಲೇ ಹೆಚ್.ಡಿ. ಕುಮಾರಸ್ವಾಮಿ ಅವರು ಕಾವೇರಿ ವಿಚಾರದ ಬಗ್ಗೆ ದೆಹಲಿಯಲ್ಲಿ ಚರ್ಚೆ ಮಾಡಿದ್ದಾರೆ. ಇದರ ಬಗ್ಗೆ ಎಲ್ಲರಿಗೂ ಮಾಹಿತಿ ಇದೆ. ಎಲ್ಲರೂ ಸರ್ಕಾರದ ಪರವಾಗಿ ಇದ್ದಾರೆ. ಯಾರು ಕೂಡ ಇದರ ವಿರೋಧ ಇಲ್ಲ. ಇದಕ್ಕೆ ಒಂದೇ ಮಾರ್ಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬೇಕು. ತಜ್ಞರನ್ನು ಕಳುಹಿಸಿ ಇಲ್ಲಿನ ವಾಸ್ತವ ಸ್ಥಿತಿಯನ್ನು ಅವಲೋಕಿಸಬೇಕು. ಆ ನಂತರ ನೀವು ಏನು ತೀರ್ಮಾನ ತೆಗೆದುಕೊಳ್ಳುತ್ತಿರೋ ಅದಕ್ಕೆ ಬದ್ಧರಾಗಿ ತೀರ್ಮಾನ ಮಾಡುತ್ತೇವೆ ಎಂದರು.

ಎನ್​ಡಿಎಗೆ- ಜೆಡಿಎಸ್ ಸೇರಲು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿರುವ ನಿರ್ಧಾರದಿಂದ ರಾಜ್ಯದಲ್ಲಿ ದೊಡ್ಡ ಶಕ್ತಿ ಬಂದಂತಾಗಿದೆ. ಎಲ್ಲಾ ಲೋಕಸಭಾ ಕ್ಷೇತ್ರ ಗೆಲ್ಲಲು ಇದು ಸಹಕಾರಿ ಆಗುತ್ತದೆ ಎಂದು ಹೇಳಿದರು.

ಕಾವೇರಿ ನೀರಿಗಾಗಿ ಬಿಜೆಪಿ ಪ್ರತಿಭಟನೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದರ ಕುರಿತು ಸುಪ್ರೀಂ ಕೋರ್ಟ್​ ಆದೇಶವನ್ನು ವಿರೋಧಿಸಿ, ಇಂದು ಮಂಡ್ಯ ಬಂದ್​ ನಡೆಯುತ್ತಿದೆ. ಹಲವು ರೈತಪರ ಸಂಘಟನೆಗಳು ಇಂದು ಮಂಡ್ಯ ಬಂದ್​ಗೆ ಕರೆ ನೀಡಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಬಿಜೆಪಿ, ಕಾವೇರಿ ನೀರು ವಿಚಾರದಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್​ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್​ ಯಡಿಯೂರಪ್ಪ, ಬಸವಾರಾಜ ಬೊಮ್ಮಾಯಿ, ಡಿ ವಿ ಸದಾನಂದ ಗೌಡ, ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 'ಕಾವೇರಿ'ದ ಪ್ರತಿಭಟನೆ: ಮಂಡ್ಯ, ಮದ್ದೂರು ಬಂದ್​ಗೆ ಉತ್ತಮ ಪ್ರತಿಕ್ರಿಯೆ

Last Updated : Sep 23, 2023, 4:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.