ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸೂಚನೆ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಅನೇಕರು ಕೊರೊನಾ ವೈರಸ್ ವಿರುದ್ಧ ಯೋಧರಂತೆ ಹೋರಾಡ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ರೌಡಿಗಳ ರೀತಿ ವರ್ತನೆ ಮಾಡಿದ್ದು ಸರಿಯಲ್ಲ. ಆದ್ದರಿಂದ ಕೀಡಿಗೆಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಖಡಕ್ ಸಂದೇಶ ರವಾನೆ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 54 ಜನರನ್ನು ಬಂಧಿಸಿದ್ದು, ಇನ್ನು ಕೆಲವರನ್ನು ಹುಡುಕುವ ಪ್ರಯತ್ನದಲ್ಲಿ ಹಿರಿಯ ಅಧಿಕಾರಿಗಳು ತೊಡಗಿದ್ದಾರೆ. ಗೃಹ ಸಚಿವರ ಆದೇಶದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನೇತೃತ್ವದಲ್ಲಿ, ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್, ದಕ್ಷಿಣಾ ವಿಭಾಗ ಡಿಸಿಪಿ ರೋಹಿಣಿ ಕಟೋಚ್, ವೈಟ್ ಫೀಲ್ಡ್ ಡಿಸಿಪಿ ಅನುಚೇತ್ , ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಹಾಗೂ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಘಟನೆ ನಡೆದ ಸ್ಥಳದಲ್ಲಿ ಮೊಕ್ಕಮ್ ಹೂಡಿ ಗಂಭೀರವಾಗಿ ತನಿಖೆ ಶುರು ಮಾಡಿದ್ದಾರೆ.