ಬೆಂಗಳೂರು: ರಾಜ್ಯದ ಕೆಲ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಬಿರುಗಾಳಿ, ಮಳೆಯ ಅಲರ್ಟ್ ನೀಡಲಾಗಿದ್ದು, ಜಿಲ್ಲಾಧಿಕಾರಿಗಳಿಗೆ ಎಚ್ಚರ ವಹಿಸುವಂತೆ ಮುನ್ಸೂಚನೆ ನೀಡಲಾಗಿದೆ.
ಕೊಡಗು, ಮೈಸೂರು, ಚಾಮರಾಜನಗರ, ಬಳ್ಳಾರಿ, ಕೋಲಾರ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಅವಧಿಯಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಅತಿಯಾದ ಗಾಳಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.