ETV Bharat / state

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​- ಬಿಜೆಪಿ ನೇರ ಹಣಾಹಣಿ... ಈ ಬಾರಿ ಯಾರಿಗೆ ವಿಜಯ ಮಾಲೆ?  ​

ರಾಜ್ಯ ರಾಜಕಾರಣದ ಪ್ರಭಾವಿ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್​​ನ ಬದ್ರಕೋಟೆಯಾಗಿದೆ. ವಿಪರ್ಯಾಸ ಎಂದರೆ ಈವರೆಗೂ ಈ ಕ್ಷೇತ್ರ ಅಭಿವೃದ್ದಿಯಾಗದೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಡಾ.ಎಂ.ವೀರಪ್ಪಮೊಯ್ಲಿ
author img

By

Published : Mar 31, 2019, 9:15 PM IST

ಬೆಂಗಳೂರು : ಲೋಕಸಭಾ ಚುನಾವಣೆಯ ರಾಜ್ಯದ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ. ಈ ಕ್ಷೇತ್ರದಲ್ಲಿ 1977 ರಿಂದ ಇಲ್ಲಿಯವರೆಗೆ ಒಂದು ಭಾರಿ ಮಾತ್ರ ಜೆಡಿಎಸ್ ಗೆದ್ದಿದೆ.

1996 ರಲ್ಲಿ ಜೆಡಿಎಸ್‌ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಾಂಗ್ರೆಸ್‌ ಪಾರುಪತ್ಯವಿದೆ. ಇನ್ನು ಬಿಜೆಪಿ ಒಮ್ಮೆಯೂ ವಿಜಯ ಸಾಧಿಸಿಲ್ಲ.‌ ಆದರೂ ಈ ಕ್ಷೇತ್ರ ಅಭಿವೃದ್ಧಿ ಮಾತ್ರ ಕಂಡಿಲ್ಲ ಅನ್ನುವ ಆರೋಪಗಳು ಕೇಳಿಬರುತ್ತಿವೆ. ಬೆಂಗಳೂರಿನಿಂದ 20 ಕಿ.ಮೀಟರ್ ದೂರವಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನ ಉದ್ಯೋಗಕ್ಕಾಗಿ ನಿತ್ಯ ಬೆಂಗಳೂರಿಗೆ ಆಗಮಿಸುತ್ತಾರೆ.

ಡಾ.ಎಂ.ವೀರಪ್ಪಮೊಯ್ಲಿ

ಎಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಇದೇ ಕ್ಷೇತ್ರದ ವ್ಯಾಪ್ತಿಗೆ ಬಂದರೂ ಇಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 2007ರಲ್ಲಿ ನೂತನ ಜಿಲ್ಲೆಯಾಗಿ ರಚನೆಯಾದ ಚಿಕ್ಕಬಳ್ಳಾಪುರ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ಬಾಗೇಪಲ್ಲಿ, ಯಲಹಂಕ ಮತ್ತು ಗೌರಿಬಿದನೂರು ಸೇರಿದಂತೆ ಎಂಟು ಕ್ಷೇತ್ರಗಳಲ್ಲಿ ಯಲಹಂಕ ಸ್ವಲ್ಪ ಅಭಿವೃದ್ಧಿ ಹೊಂದಿವೆ.

ಅದು ಬಿಟ್ಟರೆ ರಾಷ್ಟ್ರೀಯ ಹೆದ್ದಾರಿ 44 ಮತ್ತು ಹೊಸಕೋಟೆ ಹೆದ್ದಾರಿ ಅನ್ನು ಹೊರತುಪಡಿಸಿದರೆ ಯಾವುದೇ ಮೂಲ ಸೌಕರ್ಯಗಳಿಲ್ಲ. ದೇವನಹಳ್ಳಿ, ಚಿಕ್ಕಬಳ್ಳಾಪುರ, ಹೊಸಕೋಟೆ ಹಾಗೂ ದೊಡ್ಡಬಳ್ಳಾಪುರದಲ್ಲಿ ಯಾವುದೇ ಉತ್ತಮ ರಸ್ತೆಗಳಿಲ್ಲ ಮತ್ತು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ ಅನ್ನುತ್ತಾರೆ ಕ್ಷೇತ್ರದ ಜನರು.

ಮಾಜಿ ಸಂಸದ, ಕಾಂಗ್ರೆಸ್​ ಅಭ್ಯರ್ಥಿ ಡಾ. ಎಂ. ವೀರಪ್ಪ ಮೊಯ್ಲಿ ಅವರು ಪ್ರತಿನಿಧಿಸುತ್ತಿರುವ ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಕಾಂಗ್ರೆಸ್ - ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟಿದೆ. ಬಿಜೆಪಿಯಿಂದ ಮಾಜಿ ಸಚಿವ ಬಿ ಎನ್ ಬಚ್ಚೇಗೌಡ ಕಣದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 5, ಜೆಡಿಎಸ್ ಎರಡು ಹಾಗೂ ಬಿಜೆಪಿಯ ಓರ್ವ ಶಾಸಕರಿದ್ದಾರೆ. ಆದರೆ, ಶಾಸಕರಾಗಲಿ ಅಥವಾ ಸಂಸದರಾಗಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಗೋಜಿಗೆ ಹೋಗುತ್ತಿಲ್ಲ ಎನ್ನಲಾಗುತ್ತಿದೆ.

KN_BNG_01_310319_Chikkaballapur_problems_script_Ambarish Slug: ಸಮಸ್ಯೆಗಳ ಆಗರವಾಗಿದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ.. ಈ ಕ್ಷೇತ್ರದಲ್ಲಿ 1977 ರಿಂದ ಇದುವರೆಗೆ ಒಂದು ಬಾರಿ ಮಾತ್ರ ಜೆಡಿಎಸ್ ಗೆದ್ದಿದೆ... ಅದು 1996 ಜೆಡಿಎಸ್‌ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಾಂಗ್ರೆಸ್‌ ಪಾರುಪತ್ಯವಿದೆ. ಇನ್ನು ಬಿಜೆಪಿ ಒಮ್ಮೆಯೂ ವಿಜಯ ಸಾಧಿಸಿಲ್ಲ..‌ ಆದರೂ ಈ ಕ್ಷೇತ್ರದ ಅಭಿವೃದ್ಧಿ ಮಾತ್ರ ಇನ್ನು ಆಗಿಲ್ಲ.. ಬೆಂಗಳೂರಿನಿಂದ ೨೦ ಕಿ.ಮೀಟರ್ ದೂರವಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮರಿಚಿಕೆಯಾಗಿದ್ದು, ಅಲ್ಲಿನ ಜನ ಉದ್ಯೋಗಕ್ಕಾಗಿ ನಿತ್ಯ ಬೆಂಗಳೂರಿಗೆ ಆಗಮಿಸುತ್ತಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಇದೇ ಕ್ಷೇತ್ರದ ವ್ಯಾಪ್ತಿಗೆ ಬಂದರೂ ಇನ್ನು ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ.. ಅದರ ಕಡೆ ಇಲ್ಲಿ ಗೆದ್ದಂತಹ ಯಾವುದೇ ಜನ ಪ್ರತಿ ನಿಧಿಗಳು ತಲೆಕೆಡಿಸಿಕೊಂಡಿಲ್ಲ.. 2007ರಲ್ಲಿ ನೂತನ ಜಿಲ್ಲೆಯಾಗಿ ರಚನೆಯಾದ ಚಿಕ್ಕಬಳ್ಳಾಪುರ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ಬಾಗೇಪಲ್ಲಿ, ಯಲಹಂಕ ಮತ್ತು ಗೌರಿಬಿದನೂರು ಸೇರಿದಂತೆ ಎಂಟು ಕ್ಷೇತ್ರಗಳಲ್ಲಿ ಯಲಹಂಕ ಸ್ವಲ್ಪ ಅಭಿವೃದ್ಧಿ ಹೊಂದಿದೆ.. ಅದು ಬಿಟ್ಟರೆ ರಾಷ್ಟ್ರೀಯ ಹೆದ್ದಾರಿ 44 ಮತ್ತು ಹೊಸಕೋಟೆ ಹೆದ್ದಾರಿ ಅನ್ನು ಹೊರತುಪಡಿಸಿದರೆ ಯಾವುದೇ ಮೂಲ ಸೌಕರ್ಯಗಳಿಲ್ಲ. ದೇವನಹಳ್ಳಿ, ಚಿಕ್ಕಬಳ್ಳಾಪುರ, ಹೊಸಕೋಟೆ ಹಾಗೂ ದೊಡ್ಡಬಳ್ಳಾಪುರದಲ್ಲಿ ಯಾವುದೇ ಉತ್ತಮ ರಸ್ತೆಗಳಿಲ್ಲ ಮತ್ತು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇಲ್ಲಿ ನೀರಿನ ಬಹು ದೊಡ್ಡ ಸಮಸ್ಯೆ ಇದೆ. ಅಂತರ್ಜಲದ ಕೊರತೆ ಇದೆ. ಪ್ರತಿ ಚುನಾವಣೆಯಲ್ಲೂ ನೀರಿನ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡುತ್ತಾರೆ. ಆದರೆ ಚುನಾವಣೆ ನಂತರ ಮರೆತುಬಿಡುತ್ತಾರೆ... ಇಲ್ಲಿ ಕೃಷಿಗೂ ನೀರಿನ ಸಮಸ್ಯೆ ಇದ್ದು, ಬೆಳೆದ ಬೆಳೆಗೂ ಉತ್ತಮ ಬೆಲೆ ಸಿಗದೆ ಪ್ರತಿವರ್ಷ ರೈತರು ನಷ್ಟ ಅನುಭವಿಸುತ್ತಿದ್ದಾರೆ... ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್ ಸಂಸದ ಡಾ.ಎಂ.ವೀರಪ್ಪಮೊಯ್ಲಿ ಅವರು ಪ್ರತಿನಿಧಿಸುತ್ತಿರುವ ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಕಾಂಗ್ರೆಸ್ - ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟಿದ್ದು, ಬಿಜೆಪಿಯಿಂದ ಮಾಜಿ ಸಚಿವ ಬಿಎನ್ ಬಚ್ಚೇಗೌಡ ಕಣದಲ್ಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಐದು, ಜೆಡಿಎಸ್ ಎರಡು ಹಾಗೂ ಬಿಜೆಪಿ ಒಂದು ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಶಾಸಕರನ್ನು ಹೊಂದಿದೆ..‌ ಆದರೆ ಈ ಶಾಸಕರು ಆಗಲಿ ಅಥವಾ ಸಂಸದರು ಆಗಲಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಗೋಜಿಗೆ ಹೋಗುತ್ತಿಲ್ಲ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.