ETV Bharat / state

ಫುಡ್ ಪಾರ್ಕ್​ಗಳ ನಿರ್ಮಾಣದ ಉದ್ದೇಶ ಈಡೇರದಿದ್ದರೆ ನೋಟಿಸ್: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ - purpose of the construction of Food Parks must be fulfilled

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಫುಡ್​ ಪಾರ್ಕ್​ಗಳ ಸಂಖ್ಯೆ ಹೆಚ್ಚಾಗಬೇಕು. ಅಲ್ಲದೇ ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಗುರಿ ಸಾಧಿಸದ ಫುಡ್ ಪಾರ್ಕ್​ಗಳ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದರು.

ರಾಜ್ಯದ ನಾಲ್ಕು ಫುಡ್ ಪಾರ್ಕ್​ಗಳ ಪ್ರಗತಿ ಪರಿಶೀಲನಾ ಸಭೆ

author img

By

Published : Jul 3, 2020, 6:12 PM IST

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ 4 ಫುಡ್ ಪಾರ್ಕ್​ಗಳಿದ್ದು, ಅವುಗಳ ಸಂಖ್ಯೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಫುಡ್ ಕರ್ನಾಟಕ ಲಿಮಿಟೆಡ್ ಸಂಸ್ಥೆ ಬಲವರ್ಧನೆಗೆ ರೂಪಿತಗೊಂಡಿರುವ ಫುಡ್ ಪಾರ್ಕ್​ಗಳ ಪುನಶ್ಚೇತನ ಸಂಬಂಧ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಫುಡ್ ಕರ್ನಾಟಕ ಲಿಮಿಟೆಡ್ ಅಧ್ಯಕ್ಷರಾಗಿ ಅವರು ಅಧಿಕಾರ ಸ್ವೀಕರಿಸಿದ್ರು. ಮೊದಲ ಬಾರಿಗೆ ರಾಜ್ಯದ ನಾಲ್ಕು ಫುಡ್ ಪಾರ್ಕ್​ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರದ ಆತ್ಮನಿರ್ಭರ್ ಯೋಜನೆ ಅಡಿ ಫುಡ್ ಪಾರ್ಕ್​ಗೆ 4 ಸಾವಿರ ಕೋಟಿ ರೂ.ಅನುದಾನ ನೀಡಲಾಯಿತು. ಅಲ್ಲದೇ ಅನುದಾನದ ಉದ್ದೇಶ ಸಫಲವಾಗಬೇಕು ಎಂದರು.

ರಾಜ್ಯದ ನಾಲ್ಕು ಫುಡ್ ಪಾರ್ಕ್​ಗಳ ಪ್ರಗತಿ ಪರಿಶೀಲನಾ ಸಭೆ

ಈ ನಾಲ್ಕು ಫುಡ್ ಪಾರ್ಕ್​ಗಳ ಅಭಿವೃದ್ಧಿಯನ್ನು ಕಂಡು ರಾಜ್ಯದಲ್ಲಿ ಇನ್ನಷ್ಟು ಫುಡ್ ಪಾರ್ಕ್​ಗಳ ಸ್ಥಾಪನೆಗೆ ಜನರು ಮುಂದಾಗಬೇಕು. ಸರ್ಕಾರ ಸದಾ ಇವುಗಳ ಹಿಂದೆ ಬೆನ್ನೆಲುಬಾಗಿ ನಿಲ್ಲಲಿದೆ. ಹಣ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಫುಡ್ ಪಾರ್ಕ್​ಗಳನ್ನು ಅಭಿವೃದ್ಧಿಪಡಿಸದೇ ಇರುವುದು ಸರಿಯಲ್ಲ. ಕಾರಣಗಳು ಸರಿಯಾಗಿರಬೇಕು. ಸಮರ್ಪಕವಾಗಿ ಕಾರ್ಯನಿರ್ವಹಿಸದೆ ಗುರಿ ಸಾಧಿಸದ ಫುಡ್ ಪಾರ್ಕ್​ಗಳ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಫುಡ್ ಪಾರ್ಕ್​ಗಳ ನಿರ್ಮಾಣಕ್ಕೆ ಕಡಿಮೆ ವೆಚ್ಚದಲ್ಲಿ ಸರ್ಕಾರ ಭೂಮಿ ಮಂಜೂರು ಮಾಡಿದೆ. ಸರ್ಕಾರದಿಂದ ಮಂಜೂರಾದ ಭೂಮಿಯನ್ನು ಪಾರ್ಕ್​ಗಳ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ರೈತರಿಗೆ ಅನುಕೂಲ ಕಲ್ಪಿಸಲು ಮತ್ತು ರೈತರ ಉತ್ಪನ್ನಗಳ ಸದುಪಯೋಗ ಹಾಗೂ ಕೃಷಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮತ್ತು ನವೋದ್ಯಮಕ್ಕೆ ಚೈತನ್ಯ ನೀಡುವ ನಿಟ್ಟಿನಲ್ಲಿ ಅಗ್ರಿಸ್ಟಾರ್ಟಪ್​​ಗೆ ಇನ್ನೂ ಕೆಲವೇ ದಿನಗಳಲ್ಲಿ ಚಾಲನೆಯನ್ನು ನೀಡಲಾಗುತ್ತಿದೆ. ಅಗ್ರಿ ಸ್ಟಾರ್ಟಪ್ ಮೂಲಕ ಫುಡ್ ಪಾರ್ಕ್​ಗಳಿಗೂ ಅನುಕೂಲ ಕಲ್ಪಿಸಬಹುದೆಂದು ಬಿ.ಸಿ. ಪಾಟೀಲ್​​ ಸಲಹೆ ನೀಡಿದರು.

ನಾಲ್ಕು ಫುಡ್ ಪಾರ್ಕ್​ಗಳು ಎಲ್ಲಿವೆ?:

10 ನೇ ಪಂಚವಾರ್ಷಿಕ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಸಚಿವಾಲಯ ರಾಜ್ಯದಲ್ಲಿ ಕೋಲಾರ, ಹಿರಿಯೂರು, ಬಾಗಲಕೋಟೆ, ಜೇವರ್ಗಿಗಳಲ್ಲಿ ಫುಡ್ ಪಾರ್ಕ್​ಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಪಾರ್ಕ್​ಗಳ ಸ್ಥಾಪನಾ ಕಾರ್ಯದ ಉಸ್ತುವಾರಿ ಸಂಸ್ಥೆಯಾಗಿ ಆಹಾರ ಕರ್ನಾಟಕ ನಿಯಮಿತ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ 2003 ರಲ್ಲಿ ಮಾಲೂರಿನಲ್ಲಿ ಇನ್ನೋವಾ ಅಗ್ರಿ ಬಯೋಪಾರ್ಕ್, ಬಾಗಲಕೋಟೆಯಲ್ಲಿ ಗ್ರೀನ್ ಫುಡ್ ಪಾರ್ಕ್, ಹಿರಿಯೂರಿನಲ್ಲಿ ಅಕ್ಷಯ ಆಹಾರ ಪಾರ್ಕ್ ನಿಯಮಿತ, ಜೇವರ್ಗಿಯಲ್ಲಿ ಜೇವರ್ಗಿ ಫುಡ್ ಪಾರ್ಕ್ ನಿಯಮಿತ ನಾಲ್ಕು ಫುಡ್ ಪಾರ್ಕ್​ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.