ETV Bharat / state

ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ: ಸಿದ್ದರಾಮಯ್ಯ

ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು. ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಸಹಮತವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Siddaramaiah
ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ: ಸಿದ್ದರಾಮಯ್ಯ
author img

By

Published : Apr 20, 2020, 6:47 PM IST

ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ. ‌ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಘಟನೆ ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು. ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಸಹಮತವಿದೆ. ಇದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಯಾರೇ ಆಗಲಿ, ಕಾನೂನಿಗೆ ಗೌರವ ಕೊಡಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಇದೇ ವಿಚಾರವಾಗಿ ಇಂದು ಬೆಳಗ್ಗೆ ಕೂಡ ಸಿದ್ದರಾಮಯ್ಯ ಸರ್ಕಾರದ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಟ್ವೀಟ್ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.