ETV Bharat / state

ರಾಜ್ಯದಲ್ಲಿ ಈ ಯುಗಾದಿಗೆ ಕರೆಂಟ್ ಶಾಕ್.. ಏಪ್ರಿಲ್ 1ರಿಂದ  ವಿದ್ಯುತ್ ದರ ಹೆಚ್ಚಳ!? - ರಾಜ್ಯದಲ್ಲಿ ಮತ್ತೇ ವಿದ್ಯುತ್​ ದರ ಹೆಚ್ಚಳ

ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಕೆಇಆರ್‌ಸಿ ದರ ಪರಿಷ್ಕರಣೆ ಮಾಡುತ್ತದೆ. ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ಒತ್ತಾಯಿಸಲಾಗಿದೆ. ಕಂಪನಿಗಳ ನಿರ್ವಹಣೆ ವೆಚ್ಚ ಹೆಚ್ಚಳದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಕೋರಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ..

ಏಪ್ರಿಲ್ 1 ರಿಂದ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ

author img

By

Published : Mar 25, 2022, 4:07 PM IST

ಬೆಂಗಳೂರು : ರಾಜ್ಯದ ಜನರಿಗೆ ಬೆಸ್ಕಾಂನಿಂದ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಗಳಿವೆ. ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯಚ್ಛಕ್ತಿ ಸರಬರಾಜು ಕಂಪನಿಗಳು ಮುಂದಾಗಿವೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ರಚನೆಯಾಗಿರುವ ಕರ್ನಾಟಕ ವಿದ್ಯುತ್ ಪರಿಷ್ಕರಣ ಸಮಿತಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹೊಸ ದರ ಪರಿಷ್ಕರಣೆಗೆ ಒಪ್ಪಿಗೆ ಕೊಡಲಿದೆ.

ಈಗಾಗಲೇ ಫೆಬ್ರವರಿಯಲ್ಲಿ ಎಸ್ಕಾಂಗಳು ಹಾಗೂ ಸಾರ್ವಜನಿಕರಿಂದ ಕೆಇಆರ್‌ಸಿ ಅಭಿಪ್ರಾಯ ಸಂಗ್ರಹಿಸಿದೆ. ಈ ಹಿನ್ನೆಲೆ ಶೀಘ್ರದಲ್ಲೇ ಹೊಸ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಿದೆ ಎಂದು ತಿಳಿದು ಬಂದಿದೆ. ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಕೆಇಆರ್‌ಸಿ ದರ ಪರಿಷ್ಕರಣೆ ಮಾಡುತ್ತದೆ.

ಇದನ್ನೂ ಓದಿ: ಮದ್ಯದ ಮತ್ತಲ್ಲಿ ಪೊಲೀಸ್‌ ಕೊರಳಪಟ್ಟಿ ಹಿಡಿದು ಯುವತಿಯ ರಂಪಾಟ: ವಿಡಿಯೋ

ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ಒತ್ತಾಯಿಸಲಾಗಿದೆ. ಕಂಪನಿಗಳ ನಿರ್ವಹಣೆ ವೆಚ್ಚ ಹೆಚ್ಚಳದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಕೋರಲಾಗಿದೆ ಎಂದು ವಿದ್ಯುತ್ ದರ ಹೆಚ್ಚಳದ ಕುರಿತು ಬೆಸ್ಕಾಂ ತಾಂತ್ರಿಕ‌ ವಿಭಾಗದ ನಿರ್ದೇಶಕ ನಾಗಾರ್ಜುನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ತಿಂಗಳ ಅಂತ್ಯದಲ್ಲಿ ಹೊಸ ದರ ಪರಿಷ್ಕರಣೆಯ ಪಟ್ಟಿ : ಪ್ರತಿ ಯೂನಿಟ್‌ಗೆ 1.50 ರೂ. ಹೆಚ್ಚಿಸುವಂತೆ ಬೆಸ್ಕಾಂ ಪ್ರಸ್ತಾವನೆ ಕಳುಹಿಸಿದೆ. ಜನರಿಗೆ ಹೊರೆಯಾಗದಂತೆ ವಿದ್ಯುತ್ ದರ ಪರಿಷ್ಕರಣೆಯಾಗಲಿದೆ. 2022-23ರ ಸಾಲಿನಲ್ಲಿ ಪ್ರತಿ ಯೂನಿಟ್‌ಗೆ 35 ರಿಂದ 45 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ತಿಂಗಳ ಅಂತ್ಯದಲ್ಲಿ ಹೊಸ ವಿದ್ಯುತ್ ದರ ಪರಿಷ್ಕರಣೆ ಪಟ್ಟಿ ಬಿಡುಗಡೆಯಾಗಲಿದೆ ಎಂದು ನಾಗಾರ್ಜುನ್ ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.