ಬೆಂಗಳೂರು: ಶ್ರಮಿಕ್ ರೈಲುಗಳ ಮೂಲಕ ತಮ್ಮ ತಮ್ಮ ಊರಿಗೆ ಮರಳುತ್ತಿರುವ ವಲಸೆ ಕಾರ್ಮಿಕರ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಮೇ 31 ರವರೆಗೆ ಶ್ರಮಿಕ್ ರೈಲು ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ. ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ & ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ.
![The shramik train ticket fare will be paid by state govt: CM BSY](https://etvbharatimages.akamaized.net/etvbharat/prod-images/kn-bng-06-train-fare-pay-by-govt-script-7208080_22052020161531_2205f_1590144331_30.jpg)
ಈ ಹಿನ್ನೆಲೆಯಲ್ಲಿ ಮೇ 31 ರ ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಟ್ವಿಟ್ ಮೂಲಕ ಪ್ರಕಟಿಸಿದ್ದಾರೆ.