ETV Bharat / state

ಕಾಂಗ್ರೆಸ್‌ನ ಎರಡು ಪ್ರಮುಖ ಹುದ್ದೆಗಳ ಬಗ್ಗೆ ನಾಳೆ ಹೈಕಮಾಂಡ್ ಜೊತೆ ಚರ್ಚೆ ಸಾಧ್ಯತೆ - ಕೆಪಿಸಿಸಿ ಅಧ್ಯಕ್ಷ ಸ್ಥಾನ

ಉಪಚುನಾವಣೆಯ ನಂತರ ಕಾಂಗ್ರೆಸ್​​ನ ಶಾಸಕಾಂಗ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್​​ ರಾಜೀನಾಮೆ ನೀಡಿದ ಹಿನ್ನೆಲೆ, ಈ ಹುದ್ದೆಗೆ ಬೇರೆಯವರು ಸೂಕ್ತವೋ ಅಥವಾ ಮುಂದಿನ ನಡೆ ಏನು? ಎಂಬುದರ ಬಗ್ಗೆ ನಾಳೆ ಹೈಕಮಾಂಡ್​ ಜೊತೆ ಚರ್ಚೆ ನಡೆಯುವ ಸಾಧ್ಯತೆ ಇದೆ.

The two main posts of the Congress
ಕಾಂಗ್ರೆಸ್ ನ ಎರಡು ಪ್ರಮುಖ ಹುದ್ದೆ
author img

By

Published : Dec 13, 2019, 7:37 PM IST

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಶಕ್ತವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ನಾಯಕನ ಸ್ಥಾನಕ್ಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ನೀಡಿರುವ ರಾಜೀನಾಮೆ ಬಗ್ಗೆ ನಾಳೆ ಹೈಕಮಾಂಡ್ ಬಳಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಬೇಕೆಂದು ಕಾಂಗ್ರೆಸ್ಸಿನ ಬಹುತೇಕ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಬದಲಾವಣೆ ಮಾಡಬೇಕೆಂಬ ಒತ್ತಡಗಳು ಕೇಳಿ ಬಂದಿವೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಭೇಟಿ ಮಾಡಿದ ಬಹಳಷ್ಟು ನಾಯಕರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ದಿನೇಶ್ ಗುಂಡೂರಾವ್ ಅವರಿಂದ ಪಕ್ಷ ಸಂಘಟನೆ ಸಾಧ್ಯವಾಗುತ್ತಿಲ್ಲ. ಎಲ್ಲಾ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ, ಉಪಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲುಂಟಾಗಿದೆ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಾಳೆ ನಡೆಯಲಿರುವ ಭಾರತ್ ಬಚಾವೊ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಂ.ವೀರಪ್ಪಮೊಯಿಲಿ, ಕೆ.ಹೆಚ್.ಮುನಿಯಪ್ಪ, ಮಾಜಿ ಸಚಿವರಾದ ಡಿ.ಕೆ. ಶಿವಕುಮಾರ್, ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್ ಸೇರಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಕೆಪಿಸಿಸಿ, ಎಐಸಿಸಿ ಪದಾಧಿಕಾರಿಗಳು ತೆರಳುತ್ತಿದ್ದು, ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶಗೊಳ್ಳಲಿದೆ.

ಪ್ರತಿಭಟನಾ ಸ್ಥಳದಲ್ಲಿ ರಾಜ್ಯ ನಾಯಕರು, ಹೈಕಮಾಂಡ್‌ನ ಪ್ರಮುಖರಾದ ಅಹ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ನಾಯಕನ ಬದಲಾವಣೆ ಕುರಿತು ಅಹ್ಮದ್ ಪಟೇಲ್ ಅವರು ಸೋನಿಯಾಗಾಂಧಿ ಅವರ ಬಳಿ ಮಾತುಕತೆ ನಡೆಸಲಿದ್ದು, ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Intro:ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಶಕ್ತವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ನಾಯಕನ ಸ್ಥಾನಕ್ಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ನೀಡಿರುವ ರಾಜೀನಾಮೆ ಬಗ್ಗೆ ನಾಳೆ ಹೈಕಮಾಂಡ್ ಬಳಿ ಚರ್ಚೆಯಾಗಲಿದೆ. Body:ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಬೇಕೆಂದು ಕಾಂಗ್ರೆಸ್ನ ಬಹುತೇಕ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಬದಲಾವಣೆ ಮಾಡಬೇಕೆಂಬ ಒತ್ತಡಗಳು ಕೇಳಿ ಬಂದಿವೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಭೇಟಿ ಮಾಡಿದ ಬಹಳಷ್ಟು ನಾಯಕರು ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ದಿನೇಶ್ ಗುಂಡೂರಾವ್ ಅವರಿಂದ ಪಕ್ಷ ಸಂಘಟನೆ ಸಾಧ್ಯವಾಗುತ್ತಿಲ್ಲ. ಎಲ್ಲ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವಲ್ಲಿ ವಿಫಲರಾಗಿದ್ದಾಎ. ಹಾಗಾಗಿ, ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲುಂಟಾಗಿದೆ ಎಂದು ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಾಳೆ ನಡೆಯಲಿರುವ ಭಾರತ್ ಬಚಾವೊ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಂ.ವೀರಪ್ಪಮೊಯಿಲಿ, ಕೆ.ಹೆಚ್. ಮುನಿಯಪ್ಪ, ಮಾಜಿ ಸಚಿವರಾದ ಡಿ.ಕೆ. ಶಿವಕುಮಾರ್, ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್ ಸೇರಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಕೆಪಿಸಿಸಿ, ಎಐಸಿಸಿ ಪದಾಧಿಕಾರಿಗಳು ತೆರಳುತ್ತಿದ್ದಾರೆ. ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶಗೊಳ್ಳಲಿದೆ. ಪ್ರತಿಭಟನಾ ಸ್ಥಳದಲ್ಲಿ ರಾಜ್ಯ ನಾಯಕರು, ಹೈಕಮಾಂಡ್ ನ ಪ್ರಮುಖರಾದ ಅಹ್ಮದ್ ಪಟೇಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿ ಚರ್ಚಿಸಲಿದ್ದಾರೆ.
ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ನಾಯಕನ ಬದಲಾವಣೆ ಕುರಿತು ಅಹ್ಮದ್ ಪಟೇಲ್ ಅವರು ಸೋನಿಯಾಗಾಂಧಿ ಅವರ ಬಳಿ ಮಾತುಕತೆ ನಡೆಸಲಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.