ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶನ ರಾಜಧಾನಿಯಲ್ಲಿ ಅಕ್ಟೋಬರ್ 14 ರಿಂದ 25 ರ ವರೆಗೆ ನಡೆಯಲಿದೆ. ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರಲು ಸರ್ಕಾರ ನಿರ್ಧಾರ ಮಾಡಿದೆ.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ, ಪುನರ್ವಸತಿ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ಪರಿಹಾರ, ಪುನರ್ವಸತಿ ಕಾರ್ಯಗಳಿಗೆ ತೊಂದರೆ ಆಗದಿರಲೆಂದು ರಾಜಧಾನಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಚಳಿಗಾಲದ ಅಧಿವೇಶನಕ್ಕೆ ದಿನಾಂಕವೂ ನಿಗದಿ ಮಾಡಿದ್ದು, ಮುಂದಿನ ಅಕ್ಟೋಬರ್ 14 ರಿಂದ 25 ರವರೆಗೆ ಅಧಿವೇಶನ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.