ETV Bharat / state

ಮಗಳಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ ತಂದೆ ಕೊಲೆ - ನಂಜಪ್ಪ ಸರ್ಕಲ್ ಬೆಂಗಳೂರು

ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಈ ಹತ್ಯೆ ಪ್ರಕರಣ ನಡೆದಿದೆ.

Bengaluru Crime
Bengaluru Crime
author img

By ETV Bharat Karnataka Team

Published : Sep 3, 2023, 1:32 PM IST

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ತಂದೆಗೆ ಚಾಕು ಇರಿದು ಹತ್ಯೆಗೈದ ಘಟನೆ ತಡರಾತ್ರಿ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಂಜಪ್ಪ ಸರ್ಕಲ್ ಬಳಿ ನಡೆದಿದೆ.

ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿಯ ತಂದೆ ಅನ್ವರ್ ಹುಸೇನ್ ಎಂಬಾತನ ಕುತ್ತಿಗೆಗೆ ಚಾಕು ಇರಿದು ಜಾಹೀದ್ ಎಂಬಾತ ಹತ್ಯೆಗೈದಿದ್ದಾನೆ. ಅನ್ವರ್ ಹುಸೇನ್​ನ ಅಪ್ರಾಪ್ತ ಮಗಳ ಬಳಿ ಜಾಹೀದ್, ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಬಾಲಕಿ ಈ ವಿಚಾರವನ್ನು ತಂದೆಗೆ ತಿಳಿಸಿದ್ದಳು.

ಕಳೆದ ಮೂರು ತಿಂಗಳ ಹಿಂದೆಯೇ ಜಾಹೀದ್​ಗೆ ಅನ್ವರ್ ಹುಸೇನ್ ಬುದ್ದಿ ಹೇಳಿದ್ದರು. ಅಷ್ಟಾದರೂ ಸಹ ಜಾಹೀದ್ ನಿನ್ನೆ ಪುನಃ ಬಾಲಕಿಯನ್ನು ಹಿಂಬಾಲಿಸಿ ಪ್ರೀತಿಸುವಂತೆ ಪೀಡಿಸಿದ್ದ. ವಿಚಾರ ತಿಳಿದ ಅನ್ವರ್ ಹುಸೇನ್, ಆರೋಪಿಯ ಮನೆ ಬಳಿ ಹೋಗಿ ಆತನ ಮನೆಯವರಿಗೂ ವಿಚಾರ ತಿಳಿಸಿ, ತನ್ನ ಮಗಳ ತಂಟೆಗೆ ಬರದಂತೆ ತಿಳಿ ಹೇಳುವಂತೆ ಸೂಚಿಸಿದ್ದರು.

ಅನ್ವರ್​ ಆರೋಪಿಯ ಕುಟುಂಬ ಸದಸ್ಯರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮನೆಯಿಂದ ಚಾಕು ತೆಗೆದುಕೊಂಡು ಬಂದಿದ್ದ ಆರೋಪಿ ಏಕಾಏಕಿ ಅನ್ವರ್ ಹುಸೇನ್ ಕುತ್ತಿಗೆಗೆ ಇರಿದಿದ್ದಾನೆ. ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಅನ್ವರ್ ಹುಸೇನ್​ನನ್ನು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನ್ವರ್ ಹುಸೇನ್ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಶೋಕ ನಗರ ಠಾಣಾ ಪೊಲೀಸರು ಜಾಹೀದ್​ನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ನಿವೃತ್ತ ಯೋಧನ ಹತ್ಯೆ: ಚಾಕುವಿನಿಂದ ಕತ್ತು ಸೀಳಿ ನಿವೃತ್ತ ಯೋಧನನ್ನು ಬಾಮೈದ ಹತ್ಯೆಗೈದಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಿನ್ನೆ (ಶನಿವಾರ) ನಡೆದಿತ್ತು. ಚಿಕ್ಕೋಡಿಯ ವಿದ್ಯಾನಗರ ನಿವಾಸಿ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಹತ್ಯೆಯಾದವರು. ಮೃತ ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಕೊಲೆಗೈದ ಆರೋಪಿ. ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಸ್ಟೋನ್‌ ಕ್ರಷರ್ ಘಟಕ ನಡೆಸುತ್ತಿದ್ದರು.

ಶನಿವಾರ ಸಂಜೆ ಈರಗೌಡರ ಭೇಟಿಗೆ ಆಗಮಿಸಿದ್ದ ಸಂಜಯ್ ಏಕಾಏಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಈರಗೌಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ನಡೆದಿರುವುದಾಗಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿತ್ತು.

ಇದನ್ನೂ ಓದಿ: ಮೇಕೆ ಮೇಲೆ ಅತ್ಯಾಚಾರ! ಚನ್ನಪಟ್ಟಣದಲ್ಲಿ ಆಟೋ ಚಾಲಕನ ವಿರುದ್ಧ ಪೊಲೀಸರಿಗೆ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.